ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಳೆ ಸಂಜೆ ಪ್ರಧಾನಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭೇಟಿಯಾಗಲಿದ್ದಾರೆ. ಈ ವೇಳೆಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ, ಬೇಡಿಕೆಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯದಲ್ಲಿ ಕಬ್ಬು ಬೆಳೆಗಾರರು ದರ ನಿಗದಿ ಬಗ್ಗೆ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭಸಿಎಂ ಸಿದ್ಧರಾಮಯ್ಯ ಅವರು ಸಮಸ್ಯೆ ಬಗ್ಗೆ ಚರ್ಚಿಸೋದಕ್ಕೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದರು.
ನಾಳೆ ಈ ವಿಷಯವಾಗಿ ಚರ್ಚಿಸೋದಕ್ಕೆ ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ನಾಳೆ ಪ್ರಧಾನಿ ಮೋದಿಯನ್ನು ಸಿಎಂ ಸಿದ್ಧರಾಮಯ್ಯ ಭೇಟಿಯಾಗಲಿದ್ದಾರೆ.

