Monday, November 17, 2025

ಪಾಕಿಸ್ತಾನ ಗಡಿ ದಾಟಲು ಯತ್ನಿಸಿದ ಯುವಕನ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯ ಬಳಿ ಪಾಕಿಸ್ತಾನಕ್ಕೆ ಗಡಿ ದಾಟಲು ಯತ್ನಿಸಿದ ಆರೋಪದ ಮೇಲೆ 21 ವರ್ಷದ ಯುವಕನನ್ನು ಬಿಎಸ್‌ಎಫ್ ಬಂಧಿಸಿದೆ.

ಬಂಧಿತ ವ್ಯಕ್ತಿಯನ್ನು ಉತ್ತರ ಪ್ರದೇಶದ ಶಹಜಹಾನ್‌ಪುರದ ನಿವಾಸಿ ಪಂಕಜ್ ಕಶ್ಯಪ್ ಎಂದು ಗುರುತಿಸಲಾಗಿದೆ.

ಮೋಹನ್‍ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಕಾಲುವೆ ಪ್ರದೇಶದ ಬಳಿ ಗಸ್ತು ತಿರುಗುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‍ಎಫ್) ಯೋಧರು ಅನುಮಾನಾಸ್ಪದವಾಗಿ ಚಲಿಸುತ್ತಿರುವುದು ಕಂಡುಬಂದಿದ್ದು ಆ ಕೂಡಲೇ ಆತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

error: Content is protected !!