ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ 2001ರಲ್ಲಿ ನಡೆದಿದ್ದ ಬಿಲ್ಡರ್ ಸುಬ್ಬರಾಜು ಕೊಲೆ ಪ್ರಕರಣದಲ್ಲಿ ಭೂಗತಪಾತಕಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ, ಸಾಕ್ಷ್ಯಾಧಾರ ಕೊರತೆ ಹಿನ್ನಲೆಯಲ್ಲು ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ.
ಬಿಲ್ಡರ್ ಸುಬ್ಬರಾಜು ಅವರನ್ನು 2001 ಜನವರಿ 5ರಂದು ಶೇಷಾದ್ರಿಪುರಂನ ಅವರ ಕಚೇರಿಯಲ್ಲೇ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ರವಿ ಪೂಜಾರಿಯನ್ನು ಆರೋಪಿಯಾಗಿಸಲಾಗಿತ್ತು.