ಹೊಸದಿಗಂತ ಡಿಜಿಟಲ್ ಡೆಸ್ಕ್:
ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆ ಕುಂದಾಪುರದ ಘಟನೆ ಹೆಮ್ಮಾಡಿಯ ದೇವಲ್ಕುಂದದಲ್ಲಿ ಸೋಮವಾರ ನಡೆದಿದೆ. ಪೂರ್ಣಿಮಾ (38) ಕೊಲೆಯಾದ ದುರ್ದೈವಿ. ರವಿ ಆತ್ಮಹತ್ಯೆ ಮಾಡಿಕೊಂಡ ಪತಿ. ಶಿವಮೊಗ್ಗ ಜಿಲ್ಲೆ ಸಾಗರ ಮೂಲದ ದಂಪತಿಗಳಾದ ಇವರು ಹೆಮ್ಮಾಡಿ ಬಳಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು.
ಕಬ್ಬಿಣದ ಪ್ಲೇಟ್ ನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದ್ದು, ಕೊಲೆಗೈದ ನಂತರ ಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.