ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನ ಪ್ರಮುಖ ಹೋಟೆಲ್ಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಅಪರಿಚಿತ ವ್ಯಕ್ತಿಯೊಬ್ಬ ಇಂದು ಹೋಟೆಲ್ಗೆ ಕರೆ ಮಾಡಿ, ಹೋಟೆಲ್ನಲ್ಲಿ ನಾಲ್ಕು ಕಡೆ ಬಾಂಬ್ಗಳನ್ನು ಇಡಲಾಗಿದೆ ಮತ್ತು ಅವುಗಳನ್ನು ನಿಷ್ಕ್ರಿಯಗೊಳಿಸಲು 5 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ. ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಹೊಟೇಲ್ ಮ್ಯಾನೇಜ್ಮೆಂಟ್ ದೂರು ದಾಖಲಿಸಿದ್ದಾರೆ.
ಸಹಾರ್ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 336, 507 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.