ಪಾತ ಬಸ್ತಿಯಲ್ಲಿ ಬಿಗುವಿನ ವಾತಾವರಣ: ರಾಜಾಸಿಂಗ್ ವಿರುದ್ಧ ಪ್ರತಿಭಟನೆ, ಬಿಗಿ ಪೊಲೀಸ್ ಬಂದೋಬಸ್ತ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರವಾದಿ ಮೊಹಮ್ಮದ್ ಕುರಿತು ಹೇಳಿಕೆ ನೀಡಿದ ಗೋಶಾಮಹಲ್ ಶಾಸಕ ರಾಜಾಸಿಂಗ್ ಅವರನ್ನು ಪೊಲೀಸರು ಮಂಗಳವಾರ ಬಂಧಿಸಿ ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯದಲ್ಲಿ ರಾಜಾಸಿಂಗ್‌ಗೆ ಜಾಮೀನು ಮಂಜೋರಾಗಿದ್ದು, ಜಾಮೀನು ಪಡೆದ ರಾಜಾಸಿಂಗ್ ನೇರವಾಗಿ ಗೋಶಾಮಹಲ್‌ನಲ್ಲಿರುವ ತಮ್ಮ ನಿವಾಸಕ್ಕೆ ತೆರಳಿದರು. ಈ ವೇಳೆ ಕಾರ್ಯಕರ್ತರು ದೊಡ್ಡ ಮಟ್ಟದಲ್ಲಿ ಬೆಂಬಲ ಸೂಚಿಸಿದರು. ಇದೇ ವೇಳೆ ಪಾತಬಸ್ತಿಯಲ್ಲಿ ರಾಜಾ ಸಿಂಗ್ ವಿರುದ್ಧ ಕೆಲವರು ಘೋಷಣೆಗಳನ್ನು ಕೂಗಿದರು. ಎರಡೂ ಕಡೆಯಿಂದ ಪ್ರತಿಭಟನೆ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸಲು ಪಾತಬಸ್ತಿಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

ಮಂಗಳವಾರ ತಡರಾತ್ರಿ ಹಳೆ ಬಸ್ತಿಯಲ್ಲಿ ರಾಜಾ ಸಿಂಗ್ ವಿರುದ್ಧ ಸ್ಥಳೀಯ ಯುವಕರು ಬೀದಿಗಿಳಿದಿದ್ದರು. ಚಾರ್ಮಿನಾರ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಜಮಾಯಿಸಿ, ಸಾಲಿಬಂದಾ ಚೌಕದಲ್ಲಿ ರಾಜಾ ಸಿಂಗ್ ಅವರ ಪ್ರತಿಕೃತಿ ದಹಿಸಿ ಅವರನ್ನು ಬಂಧಿಸುವಂತೆ ಒತ್ತಾಯಿಸಿದರು. ಇದೇ ವೇಳೆ ಮುಘಲ್ಪುರದ ವೋಲ್ಟಾ ಕ್ರಾಸ್ ರಸ್ತೆಯಲ್ಲಿ ಪ್ರತಿಭಟನಾಕಾರರು ಪೊಲೀಸ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದರು. ಇದರಿಂದ ಹಲವರು ಗಾಯಗೊಂಡರು. ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ಲಾಠಿ ರುಚಿ ತೋರಿಸಿದರು.

ಬುಧವಾರ ಬೆಳಗ್ಗೆ ಕೂಡಾ ಚಾರ್‌ಮಿನಾರ್‌ ಸುತ್ತಮುತ್ತಲಿನ ಪಾತಬಸ್ತಿಯ ಕೆಲ ಯುವಕರು ರಾಜಾಸಿಂಗ್‌ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಪರಿಸ್ಥಿತಿ ಉದ್ವಿಗ್ನಗೊಳ್ಳುವ ಸಾಧ್ಯತೆ ಇರುವುದರಿಂದ ಪಾತಬಸ್ತಿಯಿಂದ ಗೋಶಾಮಹಲ್‌ಗೆ ತೆರಳುವ ಎಲ್ಲ ರಸ್ತೆಗಳನ್ನು ಪೊಲೀಸರು ಬಂದ್ ಮಾಡಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ರಾಜಾ ಸಿಂಗ್ ಬಂಧನಕ್ಕೆ ಆಗ್ರಹಿಸಿ ಬೇಗಂಬಜಾರ್‌ನ ಛತ್ರಿ ಸೇತುವೆ ಬಳಿ ಪ್ರತಿಭಟನಾಕಾರರು ರಸ್ತೆಗಿಳಿದಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!