ಗಣಿಹಗರಣದ ತನಿಖೆ ವೇಳೆ ಜಾರ್ಖಂಡ್ ಸಿಎಂ ಆಪ್ತನ ಮನೆಯಲ್ಲಿ ಪತ್ತೆಯಾಯ್ತು ಎಕೆ -47 !

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ನಿಕಟವರ್ತಿ ಪ್ರೇಮ್ ಪ್ರಕಾಶ್ ಅವರ ಮನೆಯಿಂದ ಜಾರಿ ನಿರ್ದೇಶನಾಲಯ (ಇಡಿ) ಎರಡು ಎಕೆ -47 ರೈಫಲ್‌ಗಳನ್ನು ವಶಪಡಿಸಿಕೊಂಡಿದೆ ಎಂದು ಮೂಲಗಳು ವರದಿ ಮಾಡಿವೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಪ್ರೇಮ್ ಪ್ರಕಾಶ್ ಅವರ ಜಾರ್ಖಂಡ್ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೋಧಕಾರ್ಯ ನಡೆಸುತ್ತಿದ್ದರು. ಈ ವೇಳೆ ಕಬ್ಬಿಣದ ಅಲ್ಮಿರಾದಲ್ಲಿ ಇರಿಸಲಾಗಿದ್ದ ಎರಡು ಎಕೆ -47 ಗಳು ಪತ್ತೆಯಾಗಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಹೊಂದಿರುವುದರಿಂದ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರತ್ಯೇಕ ಪ್ರಕರಣ ದಾಖಲಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್, ಬಿಹಾರ, ತಮಿಳುನಾಡು ಮತ್ತು ದೆಹಲಿಯಲ್ಲಿ ಅವರ ನಿವೇಶನಗಳನ್ನು ಹೊರತುಪಡಿಸಿ ಇತರ 16 ನಿವೇಶನಗಳನ್ನು ಇಡಿ ಶೋಧಿಸುತ್ತಿದೆ. ಮೂಲಗಳ ಪ್ರಕಾರ, ಈ ಪ್ರಕರಣದಲ್ಲಿ ಸಿಎಂ ಹೇಮಂತ್ ಸೊರೆನ್ ಕೂಡ ಶಾಮೀಲಾಗಿದ್ದಾರೆ ಎನ್ನಲಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಹೇಮಂತ್ ಸೋರೆನ್ ಅವರ ಶಾಸಕ ಪ್ರತಿನಿಧಿ ಪಂಕಜ್ ಮಿಶ್ರಾ ಸೇರಿದಂತೆ ಅವರ ಆಪ್ತ ಸಹಾಯಕರ 37 ಬ್ಯಾಂಕ್ ಖಾತೆಗಳಿಂದ 11.88 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ನಗದು ಮತ್ತು ಬ್ಯಾಂಕ್ ಬ್ಯಾಲೆನ್ಸ್ ಅನ್ನು ಸಾಹಿಬ್‌ಗಂಜ್ ಪ್ರದೇಶದಲ್ಲಿ ವ್ಯಾಪಕವಾಗಿ ನಡೆಸಲಾಗುತ್ತಿರುವ ಅಕ್ರಮ ಗಣಿಗಾರಿಕೆಯಿಂದ ಪಡೆಯಲಾಗಿದೆ ಎಂದು ತನಿಖೆಯ ಸಂದರ್ಭದಲ್ಲಿ ಸಂಗ್ರಹಿಸಲಾದ ವಿವಿಧ ವ್ಯಕ್ತಿಗಳ ಹೇಳಿಕೆಗಳು, ಡಿಜಿಟಲ್ ಸಾಕ್ಷ್ಯಗಳು ಮತ್ತು ದಾಖಲೆಗಳು ಪುರಾವೆಗಳು ಬಹಿರಂಗಪಡಿಸಿದೆ. ಅಕ್ರಮ ಗಣಿಗಾರಿಕೆಯಿಂದ ಗಳಿಸಿದ ಇನ್ನೂ 100 ಕೋಟಿ ರೂ.ಗಳ ಅಪರಾಧದ ಜಾಡು ಕೂಡ ಪತ್ತೆಯಾಗಿದೆ ಎಂದು ಇಡಿ ಅಧಿಕಾರಿಗಳು ಹೇಳಿರುವುದಾಗಿ ಮೂಲಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!