May 1, 2026
Friday, May 1, 2026
spot_img

WEATHER | ರಾಜ್ಯದಲ್ಲಿ ಇಂದು ಕೂಡ ಭಾರೀ ಮಳೆ, ಸಂಜೆ ನಂತರದ ಪ್ಲ್ಯಾನ್ಸ್‌ ಇದ್ದರೆ ಪೋಸ್ಟ್‌ಪೋನ್‌ ಮಾಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕದೆಲ್ಲೆಡೆ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರಿನಲ್ಲಿ ಕೂಡ ಭಾನುವಾರ ರಾತ್ರಿಯಿಂದಲೇ ಮಳೆ ಶುರುವಾಗಿದ್ದು, ಈಗ ಮೋಡಕವಿದ ವಾತಾವರಣವಿದ್ದು, ಯಾವಾಗ ಬೇಕಾದರೂ ಮಳೆ ಬರಬಹುದು ಎನ್ನುವಂತಿದೆ. ಆಗಸ್ಟ್​ 10ರವರೆಗೂ ಕರ್ನಾಟಕದ 27ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ನಿನ್ನೆ ರಾತ್ರಿ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆ ಸುರಿದಿದ್ದು, ಮನೆ ಸುತ್ತಲು ನೀರು ನಿಂತಿದೆ. ಇಂದು ಕೂಡ ತಣ್ಣನೆಯ ವಾತಾವರಣವಿದ್ದು ಸೂರ್ಯದೇವನ ದರುಶನ ಆಗಿಲ್ಲ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ,ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ರಾಮನಗರ, ಮೈಸೂರು, ಮಂಡ್ಯ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ನಗರ,ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನು ಹೊರತುಪಡಿಸಿ ಕೂಡ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !