ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದೇನೆ. ಮುಂದಿನ ವಿಧಾನಸಭೆ ಚುನಾವಣೆ ಸಿದ್ಧತೆ ಬಗ್ಗೆ ಚರ್ಚಿಸಿದ್ದೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿ ಮಾತನಾಡಿದ ಯಡಿಯೂರಪ್ಪ, ರಾಜ್ಯದ ರಾಜಕೀಯ ವಿದ್ಯಾಮಾನಗಳ ಕುರಿತಾಗಿ ಪ್ರಧಾನಿಯವರೊಂದಿಗೆ ಚರ್ಚೆ ನಡೆಸಿದ್ದೇನೆ.ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ. ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ರಾಜ್ಯ ಪ್ರವಾಸ ಮಾಡುತ್ತೇವೆ. ಸೆಪ್ಟೆಂಬರ್ 2 ರಂದು ಪ್ರಧಾನಿ ಮೋದಿ ಮಂಗಳೂರಿಗೆ ಬರುತ್ತಿದ್ದಾರೆ ಎಂದರು.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹೆಚ್ಚು ಸಮಯವನ್ನು ರಾಜ್ಯಕ್ಕೆ ನೀಡಿ. ರಾಜ್ಯಕ್ಕೆ ಹೆಚ್ಚು ಭೇಟಿ ನೀಡುವಂತೆ ಪ್ರಧಾನಿಯವರಿಗೆ ಯಡಿಯೂರಪ್ಪ ಮನವಿ ಮಾಡಿದ್ದಾರೆ.