ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದೆ. ಹೀಗಾಗಿ ಖರ್ಗೆ ಜೊತೆ ಮಾತನಾಡಲು ಹೋಗುತ್ತಿದ್ದೇನೆ ಎಂದರು.
ನಾಲ್ಕು ತಿಂಗಳ ಹಿಂದೆಯೇ ಕಾಂಗ್ರೆಸ್ ಹೈಕಮ್ಯಾಂಡ್ ಸಂಪುಟ ಪುನರ ರಚನೆಗೆ ಸೂಚಿಸಿತ್ತು. ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣವಾಗಲಿ ಎಂದು ನಾನೇ ಹೇಳಿದ್ದೆ. ನವಂಬರ್ 20 ಕ್ಕೆ ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣವಾಗುತ್ತಿದೆ. ಹಾಗಾಗಿ ಈಗ ಭೇಟಿ ಮಾಡುತ್ತೇನೆ. ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಮಾತನಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಹೇಳಿದ್ದಾರೆ. ಈ ಮೂಲಕ ರಾಜ್ಯದ ಕ್ಯಾಬಿನೆಟ್ ಪುನರ್ ರಚನೆಯಾಗುವುದನ್ನು ಖಚಿತಪಡಿಸಿದ್ದಾರೆ.

