ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಮಹದೇವಪುರ, ನೆಲಮಂಗಲದಲ್ಲಿ ನೂತನವಾಗಿ ನಿರ್ಮಿಸಿರುವ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರ ಕ್ಷೇಮವನ ಉದ್ಘಾಟನೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯಿತು.
ಈ ಸಂದರ್ಭ ಯುಪಿ ಸಿಎಂ ಯೋಗಿ ಆದಿತ್ಯನಾಥ್ , ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಡಾ.ಡಿ ವೀರೇಂದ್ರ ಹೆಗ್ಗಡೆ ಸಚಿವರುಗಳಾದ ಡಾ. ಕೆ ಸುಧಾಕರ್ , ನಾರಾಯಣಗೌಡ . ಭೈರತಿ ಬಸವರಾಜ್ , ಲೋಕಸಭಾ ಸದಸ್ಯ ಬಿ. ಎನ್. ಬಚ್ಚೇಗೌಡ, ಶಾಸಕ ಶ್ರೀನಿವಾಸ ಮೂರ್ತ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.