ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಡಲನಗರಿ ಮಂಗಳೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಯಿಂದಲ್ಲೂ ಸುಮಾರು 20 ಸಾವಿರ ಜನರು ಭಾಗವಹಿಸುವ ನಿರೀಕ್ಷೆವಿದೆ.
ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಭಾಗವಹಿಸುವ ಈ ಸಮಾವೇಶವನ್ನು ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ವಿವಿಧ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಆಗಮಿಸುವ ಹುಮ್ಮಸ್ಸಿನಲ್ಲಿದ್ದಾರೆ.