ಭೂಗಳ್ಳರಿಗೆ ನನ್ನಿಂದ ಸಹಾಯವಾಗಿದೆ ಎಂದು ತೋರಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಹೆಚ್.ಡಿ.ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಭೂಗಳ್ಳರಿಗೆ ನನ್ನಿಂದ ಸಹಾಯವಾಗಿದೆ ಎಂದು ತೋರಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಮುಂಬರುವ ಚುನಾವಣೆ ಹಾಗೂ ಜೆಡಿಎಸ್ ನ ಪಂಚರತ್ನ ರಥ ಯಾತ್ರೆ ಕಾರ್ಯಕ್ರಮದ ಕುರಿತು ಚರ್ಚಿಸಲು ಇಂದು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕರೆದಿದ್ದ ಸಭೆ ನಂತರ ಸುದ್ದಿಗಾರರ ಜತೆ ಅವರು ಮಾತನಾಡಿದರು.
ಕಾಂಗ್ರೆಸ್ ಬಗ್ಗೆ ಸಿಎಂ ಏನು ಬೇಕಾದರೂ ಮಾತನಾಡಲಿ, ನನ್ನ ಬಗ್ಗೆ ಮಾತನಾಡುವಾಗ ನೋಡಿಕೊಂಡು ಮಾತನಾಡಲಿ. ಎಚ್ಚರಿಕೆಯಿಂದ ಮಾತನಾಡಿದರೆ ಉತ್ತಮ ಎಂದು ಅವರು ಗರಂ ಆದರು.ಫೆರಿಫೆರಲ್ ರಿಂಗ್ ರೋಡ್ ಗೆ 6 ಸಾವಿರ ಕೋಟಿ ರೂ. ಯೋಜನೆ ರೂಪಿಸಿದ್ದೆ. ಇಂದು 22 ಸಾವಿರ ಕೋಟಿ ರೂ. ಆಗಿದೆ. ಇದು ಕಾಂಗ್ರೆಸ್, ಬಿಜೆಪಿಯ ಸಾಧನೆ. ಅಂದಾಜು ವೆಚ್ಚ ಹೆಚ್ಚಿಸುತ್ತಾ ಹೋಗುವುದೇ ಇವರ ಸಾಧನೆ ಎಂದು ಅವರು ವಾಗ್ದಾಳಿ ನಡೆಸಿದರು.
ರಾಜಕಾಲುವೆ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ. ಬಿಡುಗಡೆ ಮಾಡಿದ್ದೇನೆಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಹಾಗಾದರೆ ಅ ಹಣ ಯಾರ ಮನೆಗೆ ಹೋಯಿತು? ಧೈರ್ಯ ಇದ್ದರೆ ಒತ್ತುವರಿ ಮಾಡಿಕೊಂಡವರ ಹೆಸರುಗಳನ್ನು ಬಹಿರಂಗ ಮಾಡಲಿ. ಬೆಂಗಳೂರಿನಲ್ಲಿ ಕೆರೆ, ರಾಜಕಾಲುವೆ ಒತ್ತುವರಿದಾರರು ಯಾರು ಎನ್ನುವುದು ಜನರಿಗೂ ಗೊತ್ತಾಗಲಿ ಎಂದು ಪ್ರಶ್ನಿಸಿದರು.
ಸರ್ಕಾರಿ ಜಮೀನು ಲೂಟಿ ಹೊಡೆಯುವ ಬಗ್ಗೆ ಸದನ ಸಮಿತಿ ಮಾಡಿದ್ದೆ. ಯಾರ ಕಾಲದಲ್ಲಿ ಏನಾಗಿದೆಯೆಂದು ಮುಖ್ಯಮಂತ್ರಿಗಳು ಶ್ವೇತ ಪತ್ರ ಹೊರಡಿಸಲಿ ಎಂದು ಒತ್ತಾಯಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!