ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಮತ್ತೆ ಕೋವಿಡ್ ಹಾವಳಿ ತೀವ್ರಗೊಂಡಿದ್ದು, ಪಾಸಿಟಿವಿಟಿ ದರವು ಶೇ.1.98ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 7219 ಜನರಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಈ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 44,449,726ಕ್ಕೆ ಏರಿಕೆಯಾಗಿದೆ. 33 ಮಂದಿ ಇದೇ ಅವಧಿಯಲ್ಲಿ ಸಾವನ್ನಪ್ಪಿದ್ದಾರೆ. ಶುಭ ಸುದ್ದಿ ಎಂದರೆ ಇದೇ ಸಮಯದಲ್ಲಿ 9,651 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಈಗ 56,745ಕ್ಕೆ ಏರಿಕೆಯಾಗಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ