ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿ ಬೆಂಗಳೂರಿಗೆ ಮತ್ತೆ ಮಳೆ ಅಪ್ಪಳಿಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯ ರಾಜಧಾನಿಯಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ವ್ಯಾಪಕ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ನಗರ, ಸುತ್ತಮುತ್ತಲಿನ ಪ್ರದೇಶಗಳ ಹಲವೆಡೆ ಸುಮಾರು 12 ಸೆಂಟಿ ಮೀಟರ್ವರೆಗೆ ಮಳೆಯಾಗುವ ಸಾಧ್ಯತೆಯಿದ್ದು, ಜೊತೆಗೆ ಗುಡುಗು, ಮಿಂಚು ಕಾಣಿಸಿಕೊಳ್ಳಲಿದೆ ಎಂದು ಹಮಾಮಾನ ಇಲಾಖೆ ಮಾಹಿತಿ ನೀಡಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ