ಹೊಸದಿಗಂತ ಡಿಜಿಟಲ್ ಡೆಸ್ಕ್
ಬೆಂಗಳೂರಿನಲ್ಲಿ ಮಳೆ ಮತ್ತು ಜಲಾವೃತದಿಂದ ಐಟಿ ವಲಯಕ್ಕೆ ಅಂದಾಜು 225 ಕೋಟಿ ರೂಪಾಯಿ ನಷ್ಟವಾಗಿರುವ ಬಗ್ಗೆ ಚರ್ಚೆ ನಡೆಸುವುದಾಗಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಐಟಿ ಕಂಪನಿಗಳಿಗೆ ಭರವಸೆ ನೀಡಿದ್ದಾರೆ.
ರಾಜ್ಯ ರಾಜಧಾನಿಯಲ್ಲಿ ಮಳೆ ಮತ್ತು ಜಲಾವೃತದಿಂದ ಆಗಿರುವ ಹಾನಿ ಮತ್ತು ಪರಿಹಾರದ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.
” ಐಟಿ ಕಂಪನಿಗಳಿಗೆ ಕರೆ ಮಾಡಿ ನೀರಿನ ಸಮಸ್ಯೆಯಿಂದ ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡುತ್ತೇನೆ. ನಾವು ಮಳೆಯಿಂದ ಹಾನಿಗೀಡಾದವರಿಗೆ ಪರಿಹಾರ ಮತ್ತು ಇತರ ಮಳೆ ಹಾನಿ ಕ್ರಮಗಳ ಬಗ್ಗೆ ಚರ್ಚೆ ನಡೆಸಲಿದ್ದೇವೆ” ಎಂದು ಬೊಮ್ಮಾಯಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಹೊರ ವರ್ತುಲ ರಸ್ತೆ ಸಮಸ್ಯೆಯನ್ನು ಬಗೆಹರಿಸುವಂತೆ ಐಟಿ ಕಂಪನಿಗಳು ಮುಖ್ಯಮಂತ್ರಿಗೆ ಮನವಿ ಮಾಡಿದ ಬೆನ್ನಲ್ಲೇ ಮುಖ್ಯಮಂತ್ರಿಯವರಿಂದ ಈ ಹೇಳಿಕೆ ಹೊರಬಿದ್ದಿದೆ.
ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರ ತತ್ತರಿಸಿದೆ. ಮಳೆಗೆ ಬೆಂಗಳೂರಿನ ಹಲವು ಭಾಗಗಳು ಜಲಾವೃತಗೊಂಡು ಟ್ರಾಫಿಕ್ ಜಾಮ್ ಸಮಸ್ಯೆ ಉದ್ಭವಿಸಿದೆ ಮತ್ತು ಜನಜೀವನ ಅಸ್ತವ್ಯಸ್ತಗೊಂಡಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ