ಹರ್ಷ ಹತ್ಯೆ ಪ್ರಕರಣ: ವಿಶೇಷ ನ್ಯಾಯಾಲಯಕ್ಕೆ ಎನ್​​ಐಎ ಚಾರ್ಜ್‌ಶೀಟ್‌ ಸಲ್ಲಿಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಶಿವಮೊಗ್ಗದಲ್ಲಿ ನಡೆದ ಭಜರಂಗದಳದ ಕಾರ್ಯಕರ್ತ ಹರ್ಷನ ಕೊಲೆಗೆ ಸಂಬಂಧಿಸಿ ವಿಶೇಷ ನ್ಯಾಯಾಲಯಕ್ಕೆ ಎನ್​​ಐಎ ಚಾರ್ಜ್‌ಶೀಟ್‌ ಸಲ್ಲಿಸಿದೆ.

ದೇಶ ಮತ್ತು ರಾಜ್ಯದಲ್ಲಿ ನಡೆದ ಕೆಲವು ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹಿಂದೂ ಸಮುದಾಯದ ಮೇಲೆ ಈ ಆರೋಪಿಗಳು ಅಸಮಾಧಾನಗೊಂಡಿದ್ದರು. ಶಿವಮೊಗ್ಗ ನಗರದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಜನರ ನಡುವೆ ಕೋಮು ದಳ್ಳುರಿ, ದ್ವೇಷ ಮತ್ತು ದ್ವೇಷ ಹುಟ್ಟುಹಾಕಲು ಸಂಚು ರೂಪಿಸಿದ್ದರು ಎಂದು ಎನ್​​ಐಎ ತನಿಖೆ ವೇಳೆ ಕಂಡು ಬಂದಿದೆ. ಸಿಎಎ – ಎನ್‌ಆರ್‌ಸಿ ಸಮಸ್ಯೆ, ಹಿಜಾಬ್ ವಿವಾದ ಮತ್ತು ಬಜರಂಗದಳದ ಕಾರ್ಯಕರ್ತರ ಗೋಸಂರಕ್ಷಣಾ ಚಟುವಟಿಕೆಗಳ ವಿಚಾರವಾಗಿ ಆರೋಪಿಗಳು ಹಿಂದೂ ಸಮುದಾಯದ ಬಗ್ಗೆ ದ್ವೇಷವನ್ನು ಬೆಳೆಸಿಕೊಂಡಿದ್ದರು ಎಂದು ಎನ್​ಐಎ ನಡೆಸಿರುವ ತನಿಖೆಯಿಂದ ತಿಳಿದುಬಂದಿದೆ ಎಂದು ಚಾರ್ಜ್‌ಶೀಟ್​ನಲ್ಲಿ ವಿವರಿಸಲಾಗಿದೆ ಎಂದು ವಿವಿಧ ಮಾಧ್ಯಮಗಳು ವರದಿ ಮಾಡಿವೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!