ಹೊಸದಿಗಂತ ಡಿಜಿಟಲ್ ಡೆಸ್ಕ್
ಆಹಾರ ಸಚಿವ ಉಮೇಶ್ ಕತ್ತಿ ಅವರ ಅಗಲಿಕೆ ಆಘಾತ ತಂದಿದೆ. ಅವರ ಅಂತ್ಯಕ್ರಿಯೆಗೆ ಎಲ್ಲ ವ್ಯವಸ್ಥೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದಲೇ ಅಂತ್ಯಕ್ರಿಯೆ ನೆರವೇರಲಿದೆ. ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಹಾಗೂ ಮನೆಯವರಿಗೆ ಪೂಜೆಗೆ ಅವಕಾಶ ಕಲ್ಪಿಸಲಾಗಿದೆ. ಅದಾದ ಬಳಿಕ ಸರ್ಕಾರದ ವತಿಯಿಂದ ಅಂತ್ಯಕ್ರಿಯೆ ನೆರವೇರಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಇನ್ನು ಸರ್ಕಾರದಿಂದ ಘೋಷಣೆಯಾಗಿದ್ದ ಒಂದು ದಿನದ ಶೋಕಾಚರಣೆ ಮೂರುದಿನ ನಡೆಸಲು ತೀರ್ಮಾನಿಸಲಾಗಿದೆ. ಸಚಿವರ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದು, ನಾಳೆ ಹಾಗೂ ನಾಡಿದ್ದು ಮೂರು ದಿನ ಶೋಕಾಚರಣೆ ಮಾಡಲಾಗುವುದು.
ಈ ವೇಳೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಲಾಗುವುದು. ಯಾವುದೇ ಸರ್ಕಾರಿ ಕಾರ್ಯಕ್ರಮಗಳು ನಡೆಯುವುದಿಲ್ಲ. ಆದರೆ ಪ್ರವಾಹ ಪರಿಸ್ಥಿತಿ ತುರ್ತು ನಿರ್ವಹಣೆ, ಕಾರ್ಯಾಚರಣೆ ಮಾತ್ರ ಮುಂದುವರೆಯಲಿದೆ ಎಂದು ಹೇಳಿದರು.