ಹೊಸದಿಗಂತ ಡಿಜಿಟಲ್ ಡೆಸ್ಕ್
ಏಷ್ಯಾಕಪ್ ಟೂರ್ನಿಯಿಂದ ಟೀಂ ಇಂಡಿಯಾ ಬಹುತೇಕ ಹೊರಬಿದಿದ್ದು, ಆದರೂ ಇಂದು ಪಾಕಿಸ್ತಾನ ವಿರುದ್ಧ ಆಫ್ಘಾನಿಸ್ತಾನ ಗೆಲುವು ಸಾಧಿಸಿದರೆ, ಭಾರತದ ಕೊನೆಯ ಅವಕಾಶದ ಬಾಗಿಲೊಂದು ತೆರೆಯಲಿದೆ.
ಇದೀಗ ಈ ಮಹತ್ವದ ಪಂದ್ಯದಲ್ಲಿ ಪಾಕಿಸ್ತಾನ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಆಫ್ಘಾನಿಸ್ತಾನ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಭಾರತಕ್ಕೆ ಅತ್ಯಂತ ಮಹತ್ವದ ಪಂದ್ಯವಾಗಿದೆ. ಈ ಪಂದ್ಯದ ಫಲಿತಾಂಶ ಭಾರತ ಹಾಗೂ ಆಫ್ಘಾನಿಸ್ತಾನ ಎರಡೂ ತಂಡಕ್ಕೂ ಮುಖ್ಯವಾಗಿದೆ. ಆದರೆ ಪಾಕಿಸ್ತಾನ ಗೆಲುವು ಸಾಧಿಸಿದರೆ, ಟೀಂ ಇಂಡಿಯಾ ಹಾಗೂ ಆಫ್ಘಾನಿಸ್ತಾನ ಎರಡೂ ತಂಡಗಳು ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ.
ಮೊದಲ ಪಂದ್ಯದಲ್ಲಿ ಭಾರತ ವಿರುದ್ಧ ಗೆದ್ದಿದ್ದ ಪಾಕಿಸ್ತಾನ ಈ ಪಂದ್ಯದಲ್ಲೂ ಜಯಿಸಿ ಫೈನಲ್‌ನಲ್ಲಿ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಳ್ಳಲು ಎದುರು ನೋಡುತ್ತಿದೆ. ಇನ್ನು ಮೊದಲ ಪಂದ್ಯದಲ್ಲಿ ಲಂಕಾ ವಿರುದ್ಧ ಸೋತಿದ್ದ ಆಫ್ಘನ್‌ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಈ ಪಂದ್ಯದಲ್ಲಿ ಸೋತರೆ ತಂಡ ಫೈನಲ್ ರೇಸ್‌ನಿಂದ ಹೊರಬೀಳಲಿದೆ.