ಹಿಜಾಬ್​ ವಿವಾದ: ಸೋಮವಾರಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹಿಜಾಬ್​ ವಿವಾದ ಕುರಿತು ಮೂರನೇ ದಿನದ ವಿಚಾರಣೆ ಸುಪ್ರೀಂಕೋರ್ಟ್​ನಲ್ಲಿಂದು ನಡೆಯಿತು. ವಾದ- ಪ್ರತಿವಾದಿಗಳ ಬಳಿಕ ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ(ಸೆ.12 ರಂದು) ಮುಂದೂಡಲಾಗಿದೆ.

ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಮೊದಲ ದಿನ ವಿಚಾರಣೆಯಲ್ಲಿ ಅರ್ಜಿದಾರರ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ದೇವದತ್​ ಕಾಮತ್​ ಅವರು, ಬಟ್ಟೆಯ ವಿಚಾರದಲ್ಲಿ ಸರ್ಕಾರ ಮಕ್ಕಳ ಶಿಕ್ಷಣವನ್ನು ಹಾಳು ಮಾಡುತ್ತಿದೆ ಎಂದು ದೂರಿದ್ದರು. ಈ ವೇಳೆ ಪೀಠ, ಮಕ್ಕಳು ಶಾಲೆಯೊಳಗೆ ಮಿಡಿ, ಸ್ಕರ್ಟ್​ ಧರಿಸಿ ಬರಬಹುದೇ ಎಂದು ಪ್ರಶ್ನಿಸಿದ್ದರು. ಹೀಗಾಗಿ ಶಿಕ್ಷಣಕ್ಕೂ, ಬಟ್ಟೆಗೂ ಸಂಬಂಧವಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು.

ಎರಡನೇ ದಿನದ ವಿಚಾರಣೆಯಲ್ಲಿ ‘ಹಿಜಾಬ್​ ಧರಿಸುವುದು ಹಕ್ಕು’ ಎಂದು ವಾದ ಮಂಡಿಸಿದಾಗ ಕೋರ್ಟ್​, ಧರಿಸುವ ಹಕ್ಕಿದ್ದರೆ, ಧರಿಸದೇ ಇರುವ ಹಕ್ಕೂ ಇದೆಯೇ ಎಂದು ಪ್ರಶ್ನಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!