Wednesday, November 19, 2025

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: 1,000 ಗೌರವಧನ ಹೆಚ್ಚಳಕ್ಕೆ ಸರಕಾರ ಪ್ಲಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ಇದ್ದು, ಅದೇನೆಂದರೆಮುಂದಿನ ಬಜೆಟ್ ನಲ್ಲಿ 1,000 ಗೌರವಧನ ಹೆಚ್ಚಳ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ 1,000 ಗೌರವಧನ ಹೆಚ್ಚಳ ಮಾಡಲಾಗಿದೆ. ಮತ್ತೆ ಮುಂದಿನ ಬಜೆಟ್ ನಲ್ಲಿ ಗೌರವಧನವನ್ನು 1,000 ಹೆಚ್ಚಳ ಮಾಡುವುದಾಗಿ ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಗೌರವಧನ ಹೆಚ್ಚಳದ ಬಗ್ಗೆ ಈಗಾಗಲೇ ಸಿಎಂ ಸಿದ್ಧರಾಮಯ್ಯ ಜೊತೆಗೆ ಚರ್ಚೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಕಾರಾತ್ಮಕವಾಗಿಯೇ ಸ್ಪಂದಿಸಿದ್ದಾರೆ ಎಂದರು.

error: Content is protected !!