ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲ್ಕತ್ತಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಸೋತಿತು. 15 ವರ್ಷಗಳಲ್ಲಿ ದಕ್ಷಿಣ ಆಫ್ರಿಕಾ ಭಾರತದಲ್ಲಿ ಮೊದಲ ಬಾರಿಗೆ ಟೆಸ್ಟ್ ಪಂದ್ಯವನ್ನು ಗೆದ್ದಿತು. ಇದೀಗ ನವೆಂಬರ್ 22 ರಿಂದ ಪ್ರಾರಂಭವಾಗುವ ಸರಣಿಯ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಎರಡೂ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ.
ಈ ಪಂದ್ಯ ಗುವಾಹಟಿಯಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ, ಟೀಮ್ ಇಂಡಿಯಾಗೆ ಕೆಲ ಒಳ್ಳೆಯ ಸುದ್ದಿಗಳು ಸಿಕ್ಕಿವೆ. ಭಾರತದ ನಾಯಕ ಶುಭ್ಮನ್ ಗಿಲ್ ಟೀಂ ಇಂಡಿಯಾ ಜೊತೆ ಗುವಾಹಟಿಗೆ ಪ್ರಯಾಣ ಬೆಳೆಸಲಿದ್ದಾರೆ. ಆದಾಗ್ಯೂ, ಅವರ ಫಿಟ್ನೆಸ್ ತಂಡಕ್ಕೆ ಕಳವಳಕಾರಿಯಾಗಿದೆ.
ಕೋಲ್ಕತ್ತಾ ಟೆಸ್ಟ್ ಪಂದ್ಯದ ವೇಳೆ ಗಿಲ್ ಗಾಯಗೊಂಡರು. ಭಾರತದ ಮೊದಲ ಇನ್ನಿಂಗ್ಸ್‌ನಲ್ಲಿ ಕುತ್ತಿಗೆ ಸೆಳೆತದಿಂದಾಗಿ, ಗಿಲ್ ಗಾಯಗೊಂಡು ನಿವೃತ್ತಿ ಹೊಂದಬೇಕಾಯಿತು. ನಂತರ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಲು ಸಾಧ್ಯವಾಗದೆ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಶೀಘ್ರದಲ್ಲೇ ಡಿಸ್ಚಾರ್ಜ್ ಮಾಡಲಾಗಿದ್ದರೂ, ಎರಡನೇ ಟೆಸ್ಟ್‌ನಲ್ಲಿ ಅವರ ಭಾಗವಹಿಸುವಿಕೆಯನ್ನು ಇನ್ನೂ ದೃಢೀಕರಿಸಲಾಗಿಲ್ಲ.
ಎರಡನೇ ಟೆಸ್ಟ್ಗು ಮುನ್ನ ಟೀಮ್ ಇಂಡಿಯಾಕ್ಕೆ ‘ಶುಭ’ ಸುದ್ದಿ

