Saturday, November 22, 2025

ಮೆಟ್ರೋ ವಿಸ್ತರಣೆಯಿಂದ ಬೆಂಗಳೂರು ಮೇಲಿನ ಒತ್ತಡ ಕಡಿಮೆಯಾಗಲಿದ್ಯಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನಿಂದ ತುಮಕೂರಿಗೆ ನಮ್ಮ ಮೆಟ್ರೋ ರೈಲು ವಿಸ್ತರಣೆಯಿಂದ ತುಮಕೂರು ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಯೋಜನೆಗೆ ಅಪಸ್ವರ ತೆಗೆದಿರುವ ತೇಜಸ್ವಿ ಸೂರ್ಯಗೆ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಗೃಹ ಸಚಿವ ಪರಮೇಶ್ವರ್‌ ಅವರು, ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಅನೇಕ ವಿಚಾರಗಳು ಸಂಸದ ತೇಜಸ್ವಿಸೂರ್ಯ ಅವರ ಗಮನದಲ್ಲಿಲ್ಲ. ಇದೇ ಕಾರಣದಿಂದ ಯೋಜನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರತಿನಿತ್ಯ ತುಮಕೂರಿನಿಂದ ಸಾವಿರಾರು ಜನರು ಪ್ರಯಾಣ ಮಾಡುತ್ತಾರೆ. ನೆಲಮಂಗಲ, ದಾಬಸ್‌ಪೇಟೆ, ಕ್ಯಾತ್ಸಂದ್ರ ಭಾಗ ವೇಗವಾಗಿ ಬೆಳೆಯುತ್ತಿವೆ. ಕೈಗಾರಿಕೆ ಉದ್ದೇಶದಿಂದ ಜನರ ಜೀವನ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಒತ್ತಡ ಜಾಸ್ತಿ ಇದೆ. ನೀರಿಗೆ ಕಷ್ಟ, ಓಡಾಡೋಕೆ ಟ್ರಾಫಿಕ್ ಸಮಸ್ಯೆ ಇದೆಲ್ಲ ನೋಡಿಕೊಂಡು ಆ ಕಡೆ ಜೀವನ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ತುಮಕೂರಿನಲ್ಲಿ 20 ಸಾವಿರ ಎಕರೆಯಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ನಿರ್ಮಿಸಲಾಗಿದೆ. ಈಗಾಗಲೇ 200 ಕೈಗಾರಿಕೆಗಳು ಬಂದಿವೆ. ಫುಡ್‌ಪಾರ್ಕ್, ಟೈಮೆಕ್ ಜಪಾನೀಸ್ ಫ್ಯಾಕ್ಟರಿ, ಜಪಾನೀಸ್ ಟೌನ್‌ಶಿಪ್‌ಗೆ ಜಾಗ ಕೊಟ್ಟಿದ್ದೇವೆ. ಇಷ್ಟು ವೇಗವಾಗಿ ಬೆಳೆಯುತ್ತಿರುವಾಗ ಸಂಪರ್ಕ ವ್ಯವಸ್ಥೆ ಬೇಕಲ್ಲವೇ ಎಂದು ಪ್ರಶ್ನಿಸಿದ ಅವರು, ರಸ್ತೆ, ಮೆಟ್ರೋ, ರೈಲು ಸಂಪರ್ಕ ಇದ್ದರೆ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಎಂಬುದು ಉದ್ದೇಶ. ರಾಮನಗರ, ಕೋಲಾರ, ತುಮಕೂರು ನಗರಗಳನ್ನು ಬೆಳೆಸಿದರೆ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಎಂದು ಹೇಳಿದ್ದಾರೆ.

error: Content is protected !!