ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಕಾಶ್ಮೀರದ ಪೂಂಜ್ ಜಿಲ್ಲೆಯಲ್ಲಿ ಮಿನಿ ಬಸ್ ಕಮರಿಗೆ ಬಿದ್ದಿದ್ದು, ಒಂಬತ್ತು ಮಂದಿ ಮೃತಪಟ್ಟಿದ್ದಾರೆ.
ಪೂಂಜ್ ಜಿಲ್ಲೆಯ ಸವ್ಜಿಯಾನ್ ಗ್ರಾಮದಲ್ಲಿ ಅಪಘಾತ ಸಂಭವಿಸಿದ್ದು, 26 ಮಂದಿ ಗಾಯಗೊಂಡಿದ್ದಾರೆ.
ರಕ್ಷಣಾ ಕಾರ್ಯ ಜಾರಿಯಲ್ಲಿದೆ. ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳಿಯರು ಜಮಾಯಿಸಿದ್ದಾರೆ. ಕಮರಿಗೆ ಬಸ್ ಬಿದ್ದ ನಂತರ ಸ್ಥಳೀಯರು ಅಪಘಾತಕ್ಕೊಳಗಾದವರನ್ನು ಆಸ್ಪತ್ರೆಗೆ ದಾಖಲಿಸಲು ಸಹಾಯ ಮಾಡುತ್ತಿದ್ದಾರೆ.
Mini bus accident in Sawjian area of Poonch
Injuries reported
More Details Awaited pic.twitter.com/NpoZ6eS7Wj
— Qadri (@NiyazQadri9) September 14, 2022