ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಾಮಿಡಿ ಕಿಲಾಡಿ ಖ್ಯಾತಿಯ ಕಿರುತೆರೆ ನಟಿ ನಯನಾ ವಿರುದ್ಧ FIR ದಾಖಲಾಗಿದೆ. ಕಲಬುರಗಿಯ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಕಾಯ್ದೆ ಅಡಿ (ಅಟ್ರಾಸಿಟಿ) ದೂರು ದಾಖಲಾಗಿದೆ.
ನಯನಾ ವಿರುದ್ಧ ಅಕ್ಟೋಬರ್ 29 ರಂದು ಖಾಸಗಿ ಕಂಪನಿಯ ಸಾರ್ವಜನಿಕ ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪವಿದ್ದು, ದಲಿತ ಸೇನೆ ಕಲಬುರಗಿ ಜಿಲ್ಲಾಧ್ಯಕ್ಷ ಮಂಜುನಾಥ ಭಂಡಾರಿ ನೀಡಿದ ದೂರಿನಡಿ FIR ದಾಖಲಾಗಿದೆ.
ನಯನ ಕಾರ್ಯಕ್ರಮದಲ್ಲಿ ಶೋಷಿತ ಸಮುದಾಯಕ್ಕೆ ಉದ್ದೇಶ ಪೂರ್ವಕವಾಗಿ ಅವಮಾನ ಮಾಡಿದ್ದಾರೆ. ಅವರ ವಿರುದ್ಧ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಕಠಿಣಕ್ರಮ ಜರುಗಿಸಬೇಕು ಎಂದು ಮಂಜುನಾಥ್ ಭಂಡಾರಿ ಆಗ್ರಹಿಸಿದ್ದಾರೆ.

