Saturday, November 22, 2025

ಜೈಲಿನಲ್ಲಿ ಕೈದಿಗಳ ಪಾರ್ಟಿಯ ವಿಡಿಯೋ ವೈರಲ್: ವಿಚಾರಣೆ ಸಮಯ ವಿಜಯಲಕ್ಷ್ಮಿ ಹೆಸರು ಹೇಳಿದ್ರಾ ಧನ್ವೀರ್?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜೈಲಿನಲ್ಲಿ ಕೈದಿಗಳ ಗುಂಡು ಪಾರ್ಟಿಯ ವಿಡಿಯೋ ವೈರಲ್ ಪ್ರಕರಣ ಸಂಬಂಧ ಇತ್ತೀಚೆಗೆ ಸಿಸಿಬಿ ಪೊಲೀಸರು ನಟ ಧನ್ವೀರ್ ಗೌಡರನ್ನು ಕರೆಸಿ ವಿಚಾರಣೆ ನಡೆಸಿದ್ದರು. ಅವರ ಫೋನ್‌ನಲ್ಲಿ ಯಾವುದೇ ದಾಖಲೆ ಸಿಕ್ಕಿರಲಿಲ್ಲ ಎನ್ನಲಾಗಿತ್ತು. ಆದರೆ, ಮತ್ತೊಮ್ಮೆ ವಿಚಾರಣೆಗೆ ಕರೆದಾಗ ವಿಜಯಲಕ್ಷ್ಮೀ ಹೆಸರನ್ನು ಧನ್ವೀರ್ ಹೇಳಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ನಟಿ ದರ್ಶನ್‌ ಪತ್ನಿ ವಿಜಯಲಕ್ಷ್ಮೀಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಲಾಯರ್‌ನಿಂದ ನನಗೆ ವಿಡಿಯೋ ಬಂತು, ನಾನು ವಿಜಯಲಕ್ಷ್ಮೀಗೆ ಕಳುಹಿಸಿದ್ದೆ. ನಾನು ವಿಡಿಯೋ ವೈರಲ್ ಮಾಡಿಲ್ಲ, ಅದು ಹೇಗೆ ವೈರಲ್ ಆಯ್ತೋ ಗೊತ್ತಿಲ್ಲ ಎಂದಿದ್ದಾರೆ. ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತನಿಖಾಧಿಕಾರಿ ತಂದಿದ್ದಾರೆ.

ಇನ್ನು ವಿಜಯಲಕ್ಷ್ಮೀಯನ್ನು ವಿಚಾರಣೆಗೆ ಕರೆಯೋ ಬಗ್ಗೆ ಚರ್ಚೆ ನಡೆದಿದ್ದು, ಧನ್ವೀರ್ ಸಂಪೂರ್ಣ ಸತ್ಯ ಬಾಯಿಬಿಟ್ಟಿಲ್ಲ ಎಂದರೆ ಕರೆಸಿ ಎಂದು ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ. ಹೀಗಾಗಿ ಕೇಸ್‌ನಲ್ಲಿ ವಿಜಯಲಕ್ಷ್ಮೀಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

error: Content is protected !!