Saturday, November 22, 2025

ತಡೆದಿಲ್ಲ, ಮರೆತಿಲ್ಲ! ಗೃಹಲಕ್ಷ್ಮಿ ಯೋಜನೆಯ ಬಾಕಿ 2 ತಿಂಗಳ ಹಣ ಒಂದೇ ಬಾರಿಗೆ ಜಮಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ ಯೋಜನೆ’ಯ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಹತ್ವದ ಗುಡ್‌ನ್ಯೂಸ್ ನೀಡಿದ್ದಾರೆ. ಈ ಯೋಜನೆಯಡಿ ಬಾಕಿ ಉಳಿದುಕೊಂಡಿದ್ದ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಎರಡು ಕಂತುಗಳ ಹಣವನ್ನು ಒಂದೇ ಸಲಕ್ಕೆ ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ಘೋಷಿಸಿದ್ದಾರೆ.

ಯೋಜನೆ ಪ್ರಾರಂಭವಾದ ನಂತರ ಕೆಲವು ಫಲಾನುಭವಿಗಳಿಗೆ ತಾಂತ್ರಿಕ ಕಾರಣಗಳಿಂದ ಅಥವಾ ಆಡಳಿತಾತ್ಮಕ ವಿಳಂಬದಿಂದಾಗಿ ಈ ಎರಡು ತಿಂಗಳ ಹಣ ಪಾವತಿಯಾಗಿರಲಿಲ್ಲ. ಈ ಬಗ್ಗೆ ಫಲಾನುಭವಿಗಳಿಂದ ಸಾಕಷ್ಟು ಪ್ರಶ್ನೆಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಗೃಹಲಕ್ಷ್ಮಿಯರ ಬಾಕಿ ಹಣವನ್ನು ತಡೆಹಿಡಿಯುವುದಿಲ್ಲ. ಎರಡು ತಿಂಗಳ ಒಟ್ಟು ಹಣ 4000 ವನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಲು ಇಲಾಖೆ ಸಿದ್ಧತೆ ನಡೆಸಿದೆ ಎಂದು ತಿಳಿಸಿದ್ದಾರೆ. ಈ ಮೂಲಕ, ಆರ್ಥಿಕ ನೆರವಿನ ನಿರೀಕ್ಷೆಯಲ್ಲಿದ್ದ ಲಕ್ಷಾಂತರ ಮಹಿಳೆಯರಿಗೆ ದೊಡ್ಡ ನಿರಾಳತೆ ದೊರೆತಂತಾಗಿದೆ.

error: Content is protected !!