ಹೊಸ ದಿಗಂತ ಡಿಜಿಟಲ್ ಡೆಸ್ಕ್
ಬೆಂಗಳೂರಿನಲ್ಲಿ ಹಾಡಹಗಲೇ ಬರೋಬ್ಬರಿ 7 ಕೋಟಿ ರೂಪಾಯಿ ಹಣವನ್ನು ದರೋಡೆ ಮಾಡಲಾಗಿದೆ. ಚಲಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ ಚೆಕ್ಕಿಂಗ್ ಮಾಡುವ ನೆಪದಲ್ಲ ದರೋಡೆಕೋರರು ಹಣ ಲೂಟಿ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್ ಕಳ್ಳರನ್ನು ನಾವು ಖಂಡಿತಾ ಹಿಡಿಯುತ್ತೇವೆ. ಈವಾಗಷ್ಟೇ ಪ್ರಕರಣದ ಲೀಡ್ ಸಿಕ್ಕಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆ ಪ್ರಕರಣದ ಬಗ್ಗೆ ವಿಧಾನಸೌಧದ ಆವರಣದಲ್ಲಿ ಮಾತನಾಡಿದ ಪರಮೇಶ್ವರ್, ದರೋಡೆ ಬಗ್ಗೆ ಮಾಹಿತಿ ಸಿಕ್ಕಿದೆ. ಇದಕ್ಕೆ ಮೂಲ ಕಾರಣ ಯಾರು? ಎಟಿಎಂಗೆ ಹಣ ತಂದು ಹಾಕುವ ಮಾಹಿತಿ ಕೊಟ್ಟಿದ್ದು ಯಾರು? ಹಣ ಹಾಕುವವರಲ್ಲಿ ಯಾರಾದರೂ ಇದ್ದಾರೋ ಇಲ್ಲವೋ ಅನ್ನೋದು ಗೊತ್ತಿಲ್ಲ. ಈವಾಗಷ್ಟೇ ಲೀಡ್ ಸಿಕ್ಕಿದೆ. ಈ ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.
ಕೆಲವು ಮಾಹಿತಿ ಸಿಕ್ಕಿದೆ, ಅದೆಲ್ಲವನ್ನೂ ಹೇಳಲು ಆಗಲ್ಲ. ಎಲ್ಲ ಮಾಹಿತಿಯನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ. ಖಂಡಿತವಾಗಿ ಅವರನ್ನು ಹಿಡಿದಾಕುತ್ತೇವೆ. ವೆಹಿಕಲ್ ನಂಬರ್ ಎಲ್ಲ ಮಾಹಿತಿ ಸಿಕ್ಕಿದೆ. ಬೆಂಗಳೂರಿನಲ್ಲಿ ಇಂತಹ ಘಟನೆ ಹಾಡುಹಗಲಲ್ಲೇ ನಡೆದಿದ್ದಿಲ್ಲ. ಏಳು ಕೋಟಿಗೂ ಹೆಚ್ಚು ಮೊತ್ತದ ಹಣ ರಾಬರಿಯಾಗಿದೆ. ಇಲ್ಲಿಯವರಾ? ಹೊರ ರಾಜ್ಯದ ವ್ಯಕ್ತಿಗಳಾ ಅನ್ನೋದು ಗೊತ್ತಾಗಲಿದೆ. ಬಿಜೆಪಿ ಆರೋಪ ವಿಚಾರದ ಬಗ್ಗೆ ನೀವು ಅವರನ್ನೇ ಕೇಳಬೇಕು. ಆದರೆ, ಕಳ್ಳರನ್ನ ನಾವು ಹಿಡಿದಾಕುತ್ತೇವೆ ಎಂದು ಪರಮೇಶ್ವರ್ ಹೇಳಿದ್ದಾರೆ.

