ಪಶ್ಚಿಮಘಟ್ಟ ಕರಡು ಅಧಿಸೂಚನೆ: ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಘಟ್ಟದ 55,000 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಕರಡು ಅಧಿಸೂಚನೆ ಹೊರಡಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮತ್ತು ನ್ಯಾಯಮೂರ್ತಿ ರವೀಂದ್ರ ಭಟ್ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠವು ಅರ್ಜಿ ವಿಚಾರಣೆ ನಡೆಸಿದ್ದು, ನಾಲ್ಕು ವರ್ಷಗಳ ಬಳಿಕ ಇದರ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದೀರಿ. ಇತ್ತೀಚಿನ ಕರಡು ಅಧಿಸೂಚನೆಯನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿ. ತಡವಾಗಿ ಸಲ್ಲಿಸಲಾಗಿರುವ ಇಂತಹ ಅರ್ಜಿಗಳನ್ನು ನಾವು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೆಳಿದ್ದು, ಅರ್ಜಿಯನ್ನು ವಜಾಗೊಳಿಸಿದೆ.

2018 ಅಕ್ಟೋಬರ್ 3ರಂದು ಹೊರಡಿಸಲಾಗಿರುವ ಕರಡು ಅಧಿಸೂಚನೆಯು ಸಂವಿಧಾನದ 12ನೇ ಪರಿಚ್ಛೇದದಡಿ ರೈತರಿಗೆ ನೀಡಲಾಗಿರುವ ಜೀವನ ಮತ್ತು ಜೀವನೋಪಾಯದ ಹಕ್ಕನ್ನು ಉಲ್ಲಂಘಿಸಲಿದೆ ಎಂದು ಕೇರಳದ ಕರ್ಶಕ ಶಬ್ದಂ (ರೈತರ ಧ್ವನಿ) ಎಂಬ ಸ್ವಯಂ ಸೇವಾ ಸಂಸ್ಥೆಯು ಅರ್ಜಿಯಲ್ಲಿ ದೂರಿತ್ತು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!