ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದೆಡೆ ದಕ್ಷಿಣ ಕನ್ನಡದ ಹಲವೆಡೆ ರಾಷ್ಟ್ರೀಯ ತನಿಖಾ ತಂಡ ಬಲೆ ಬೀಸಿರುವಂತೆಯೇ ಇತ್ತ ರಾಜ್ಯದಲ್ಲಿನ ಪ್ರಮುಖ ಪ್ರಕರಣವೊಂದಕ್ಕೆ ಸಂಬಂಧಿಸಿ ರಾಜ್ಯ ಪೋಲೀಸ್ ನಿರ್ದೇಶನದಂತೆ ಬಂಟ್ವಾಳ ತಾಲೂಕಿನ ಬೋಳಂತೂರು ಎಂಬಲ್ಲಿನ ನಿವಾಸಿಯೋರ್ವನ ಮನೆಗೆ ಬಂಟ್ವಾಳ ಹಾಗೂ ವಿಟ್ಲ ಪೋಲೀಸರ ತಂಡ ಜಂಟಿಯಾಗಿ ದಾಳಿ ನಡೆಸಿದೆ.
ಪ್ರಾಥಮಿಕ ಮಾಹಿತಿಗಳ ಪ್ರಕಾರ ಬೋಳಂತೂರು ನಿವಾಸಿ ಮುಹಮ್ಮದ್ ತಬ್ಸೀರ್ ಎಂಬಾತನ ಮನೆಗೆ ಪೊಲೀಸರು ದಾಳಿ ನಡೆಸಿದ್ದು, ಪ್ರಕರಣದ ಗೌಪ್ಯತೆ ಕಾಪಾಡುವ ನಿಟ್ಟಟಿನಲ್ಲಿ ಹೆಚ್ಚಿನ ಮಾಹಿತಿ ಬಹಿರಂಗಪಡಿಸಲು ಪೊಲೀಸರು ನಿರಾಕರಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ ತಬ್ಸೀರ್‌ಗೆ ಸೇರಿದ ಎರಡು ಮನೆಗಳಿಗೆ ದಾಳಿ ನಡೆಸಿ ಅಲ್ಲಿಂದ ಎಲ್ಲಾ ಮಾಹಿತಿ ಕಲೆ ಹಾಕಲಾಗಿದೆ.
ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್‌ಪೆಕ್ಟರ್ ಟಿ.ಡಿ. ನಾಗರಾಜ್, ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ, ವಿಟ್ಲ ಇನ್ಸ್‌ಪೆಕ್ಟರ್ ನಾಗರಾಜ್ ಎಚ್, ನಗರ ಠಾಣಾ ಪೋಲೀಸ್ ಎಸ್.ಐ. ಅವಿನಾಶ್, ಗ್ರಾಮಾಂತರ ಎಸ್ ಐ ಹರೀಶ್, ವಿಟ್ಲ ಎಸ್.ಐ. ಸಂದೀಪ್ ಅವರುಗಳ ತಂಡ ಈ ಕಾರ್ಯಾಚರಣೆ ನಡೆಸಿದೆ.