ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ತನಿಖಾ ತಂಡದ ತನಿಖೆಯ ಭಾಗವಾಗಿ ಗುರುವಾರ ನಸುಕಿನಿಂದ ನಡೆಯುತ್ತಿರುವ ದಾಳಿಯಲ್ಲಿ ಕರಾವಳಿ ಹಾಗೂ ಕೇರಳ ಭಾಗವನ್ನು ಹೆಚ್ಚಾಗಿ ಕೇಂದ್ರೀಕರಿಸಲಾಗಿದ್ದು, ಕಡಲತಡಿ ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್‌ಐ ಕಚೇರಿಯಲ್ಲೂ ಅಽಕಾರಿಗಳು ಮಾಹಿತಿ ಸಂಗ್ರಹ ನಡೆಸಿದ್ದಾರೆ.
ಶಸ್ತ್ರಸಜ್ಜಿತ ಕೇಂದ್ರೀಯ ಪಡೆಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದ ಅಧಿಕಾರಿಗಳು, ಮಾಹಿತಿಗಾಗಿ ಜಾಲಾಡಿದ್ದು, ಹಲವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಕುಳಾಯಿಯಲ್ಲಿರುವ ಎಸ್‌ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷರ ಸೋದರನ ಮನೆಗೂ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.