Saturday, November 22, 2025

ಬಾಡಿಗೆ ಮನೆಯಲ್ಲಿದ್ದು ಮಾದಕವಸ್ತು ದಂಧೆ: ಎಂಡಿಎಂಎ ಸಹಿತ ಬಲೆಗೆ ಬಿದ್ದ ಆರೋಪಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಕಮ್ಮಾಡಿ ಮರದ ಮಿಲ್‌ ಬಳಿ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದ ವ್ಯಕ್ತಿ ನಿಷೇಧಿತ ಎಂಡಿಎಂಎ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಬಾಡಿಗೆ ಕೋಣೆಯಲ್ಲಿ ವಾಸ್ತವ್ಯವಿದ್ದ ಕಬಕ ನಿವಾಸಿ ಮಹಮ್ಮದ್‌ ಮುಸ್ತಾಫ (36) ಬಂಧಿತ ಆರೋಪಿ.

ಮುಸ್ತಾಫ ಅಕ್ರಮವಾಗಿ ನಿಷೇದಿತ ಮನೋನ್ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪುತ್ತೂರು ನಗರ ಠಾಣೆಯ ಪೊಲೀಸ್‌ ಉಪನಿರೀಕ್ಷಕ ಜನಾರ್ದನ ಕೆ.ಎಂ. ಅವರು ಸಿಬ್ಬಂದಿ ಜತೆ ಸ್ಥಳಕ್ಕೆ ತೆರಳಿ ಪರೀಶಿಲಿಸಿದಾಗ, ಬಾಡಿಗೆ ಕೋಣೆಯಲ್ಲಿ ಆರೋಪಿಯು ಅಕ್ರಮವಾಗಿ 14 ಗ್ರಾಂ ನಿಷೇದಿತ ಮಾದಕ ಮನೋನ್ಮಾದಕ ಎಂಡಿಎಂಎ ವಸ್ತುವನ್ನು ತನ್ನ ಬಳಿ ಇಟ್ಟುಕೊಂಡು ಮಾರಾಟ ಮಾಡುತ್ತಿರುವುದು ಕಂಡು ಬಂದಿತು.

ಈ ಬಗ್ಗೆ ಆರೋಪಿ ಮಹಮ್ಮದ್ ಮುಸ್ತಪಾನ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 109/2025 ಕಲಂ; 8(ಸಿ),22(ಬಿ) ಎನ್ ಡಿ ಪಿ ಎಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಲಾಗಿದೆ.

ಆರೋಪಿ ಮಹಮ್ಮದ್ ಮುಸ್ತಪಾ ವಿರುದ್ಧ ಈಗಾಗಲೇ, ಪುತ್ತೂರು ನಗರ ಠಾಣೆಯಲ್ಲಿ ಅಕ್ರ:141/2015 ಪೋಕ್ಸೊ ಪ್ರಕರಣ ದಾಖಲಾಗಿ, ಸದ್ರಿ ಪ್ರಕರಣದಲ್ಲಿ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಇದಲ್ಲದೆ, ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ 48/2024, 108/2024 ರಲ್ಲಿ ಮಾದಕವಸ್ತು ಮಾರಾಟದ ಪ್ರಕರಣಗಳು ಕೂಡಾ ದಾಖಲಾಗಿದೆ.

error: Content is protected !!