ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಭೂ ಕುಸಿತ: ಮದ್ಯೆ ಸಿಲುಕಿದ 1,500 ಕ್ಕೂ ಹೆಚ್ಚು ಪ್ರಯಾಣಿಕರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಹೆಲ್ಗುಗಡ್ ಬಳಿ ಭಾರಿ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿದ್ದು, ರಾಷ್ಟ್ರೀಯ ಹೆದ್ದಾರಿ 108ರ ಸಂಚಾರವನ್ನು ಬಂದ್​ ಮಾಡಲಾಗಿದೆ.
ವರದಿಗಳ ಪ್ರಕಾರ, ಸುಂಗರ್ ಮತ್ತು ಗಂಗ್ನಾನಿ ಪ್ರದೇಶಗಳಲ್ಲಿ ಪ್ರಸ್ತುತ 1,500 ಕ್ಕೂ ಹೆಚ್ಚು ಪ್ರಯಾಣಿಕರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇಲ್ಲಿ ಸಂಚರಿಸುತ್ತಿದ್ದ ಸವಾರರೆಲ್ಲ ತಮ್ಮ ತಮ್ಮ ವಾಹನಗಳಲ್ಲಿ ಬಂಧಿಯಾಗಿದ್ದು, ಪೇಚಿಗೆ ಸಿಲುಕಿದ್ದಾರೆ.
ಮಂಗಳವಾರವಷ್ಟೇ ಈ ರಸ್ತೆಯಲ್ಲಿ ಭೂ ಕುಸಿತ ಸಂಭವಿಸಿತ್ತು. ಆದರೆ ಮಳೆ ಕಡಿಮೆ ಆಗಿದ್ದರಿಂದ ಬುಧವಾರವಷ್ಟೇ ರಸ್ತೆ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿತ್ತು.ಆದರೆ ಇಂದು ಮತ್ತೆ ಭೂ ಕುಸಿತ ಸಂಭವಿಸಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ.
ಈ ಮಧ್ಯೆ, ರಾಜ್ಯದ ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ಹೆದ್ದಾರಿಯಲ್ಲಿ ಬುಧವಾರ ಇದೇ ರೀತಿ ಭೂಕುಸಿತ ಸಂಭವಿಸಿದೆ. ಎನ್‌ಎಚ್‌ನ ಒಂದು ಭಾಗವು ಒಳಹೊಕ್ಕಿದ್ದರಿಂದ ಆ ಪ್ರದೇಶದಲ್ಲಿ ಕಾರುಗಳು ರಸ್ತೆಯ ಎರಡೂ ಬದಿಗಳಲ್ಲಿ ಜಾಮ್ ಆಗುತ್ತಿರುವುದು ಕಂಡುಬಂದಿದೆ. ರಾಷ್ಟ್ರೀಯ ಹೆದ್ದಾರಿ ನಿಗಮ ಸ್ಥಳಕ್ಕೆ ಧಾವಿಸಿ ದುರಸ್ತಿ ಕಾರ್ಯವನ್ನು ಕೈಗೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!