ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ನಾಗ್ಪುರದ ವಿದರ್ಭ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಆಸ್ಟ್ರೇಲಿಯಾ ನಡುವೆ ಎರಡನೇ ಟಿ20 ಪಂದ್ಯ ಆಯೋಜಿಸಲಾಗಿದೆ, ಆದರೆ ಪಂದ್ಯ ನಡೆಯುವುದು ಬಹುತೇಕ ಅನುಮಾನವಾಗಿದೆ.
ನಾಗ್ಪುರದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಪಂದ್ಯ ನಡೆಯುವುದು ಬಹುತೇಕ ಅನುಮಾನವಾಗಿದೆ. ಗುರುವಾರ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಆಟಗಾರರು ಅಭ್ಯಾಸಕ್ಕೂ ಮೈದಾನಕ್ಕೆ ಇಳಿಯಲು ಸಾಧ್ಯವಾಗಿಲ್ಲ. ಇಂದು ಕೂಡ ಮಳೆ ಸಾಧ್ಯತೆ ಇದ್ದು, ವರುಣದ ಕಾಟ ಇರಲಿದೆ ಎನ್ನಲಾಗಿದೆ. ಸಂಜೆ ಮಳೆ ಬರುವ ಸಂಭವಿದ್ದು ಪಂದ್ಯ ರದ್ದಾಗುವ ಸಾಧ್ಯತೆ ಹೆಚ್ಚಿದೆ.