ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನ ಮಸೀದಿಯೊಂದರ ಬಳಿ ಸ್ಫೋಟ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಇನ್ನು ಹಲವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗುತ್ತಿದೆ. ನಿಖರವಾದ ಸಂಖ್ಯೆ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮಸೀದಿ ಬಳಿಯ ಮುಖ್ಯ ರಸ್ತೆಯಲ್ಲಿ ಸ್ಫೋಟ ಸಂಭವಿಸಿದೆ. ಪೊಲೀಸ್ ತಂಡಗಳು ಸ್ಥಳದಲ್ಲಿದ್ದು, ತನಿಖೆ ನಡೆಯುತ್ತಿವೆ ಎಂದು ಆಂತರಿಕ ಸಚಿವ ವಕ್ತಾರ ಅಬ್ದುಲ್ ನಫಿ ಟಾಕೋರ್ ಹೇಳಿದರು.
ಪ್ರಾರ್ಥನೆಯ ನಂತರ ಜನರು ಮಸೀದಿಯಿಂದ ಹೊರ ಬರುತ್ತಿದ್ದ ಸಮಯದಲ್ಲಿ ಸ್ಫೋಟ ಸಂಭವಿಸಿದೆ ಎಂದು ಕಾಬೂಲ್ ಪೊಲೀಸ್ ವಕ್ತಾರ ಖಾಲಿದ್ ಜದ್ರಾನ್ ಹೇಳಿದ್ದಾರೆ.