ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 2ನೇ ಟಿ20 ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದ ಕ್ರೀಡಾಂಗಣ ಒದ್ದೆಯಾಗಿದೆ. ಸಿಬ್ಬಂದಿಗಳು ಮೈದಾನ ಸಜ್ಜುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೀಗಾಗಿ ಟಾಸ್ ವಿಳಂಬವಾಗಿದೆ.
7 ಗಂಟೆಗೆ ಅಂಪೈರ್ ಹಾಗೂ ಮ್ಯಾಚ್ ರೆಫ್ರಿ ಮೈದಾನ ಪರೀಶಿಲನೆ ನಡೆಸಿದ್ದಾರೆ. ಶೀಘ್ರದಲ್ಲೇ ಪಂದ್ಯ ಆರಂಭಗೊಳ್ಳುವ ಸಾಧ್ಯತೆ ಇದೆ.
ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ದ್ವಿಪಕ್ಷೀಯ ಸರಣಿ ಅತ್ಯಂತ ಮಹತ್ವದ್ದಾಗಿದೆ.
ಭಾರತ ಮೊದಲ ಪಂದ್ಯ ಕೈಚೆಲ್ಲಿದೆ. ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 208 ರನ್ ಸಿಡಿಸಿ ಅಬ್ಬರಿಸಿತ್ತು. ಆದರೆ ಗೆಲುವು ಮಾತ್ರ ಸಿಗಲಿಲ್ಲ.
ಇದೀಗ ಎರಡನೇ ಟಿ20 ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಪಂದ್ಯ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಓವರ್ ಕಡಿತಗೊಳ್ಳುವ ಸಾಧ್ಯತೆಗಳಿವೆ. ಹೀಗಾದಲ್ಲಿ ಟೀಂ ಇಂಡಿಯಾಗೆ ಈ ಪಂದ್ಯ ಮತ್ತಷ್ಟು ಕಠಿಣವಾಗಲಿದೆ. ಇಷ್ಟೇ ಅಲ್ಲ ಈ ಪಂದ್ಯದಲ್ಲಿ ಟಾಸ್ ಪ್ರಮುಖ ಪಾತ್ರ ನಿರ್ವಹಿಸಲಿದೆ. ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕೆಲ ಬದಲಾವಣೆಗಳನ್ನು ಮಾಡುವ ಸಾಧ್ಯತೆ ಗಳಿವೆ. ಈ ಮೂಲಕ ಭರ್ಜರಿಯಾಗಿ ಕಮ್ಬ್ಯಾಕ್ ಮಾಡಲು ಟೀಂ ಇಂಡಿಯಾ ಪ್ಲಾನ್ ಮಾಡಿಕೊಂಡಿದೆ. ಆದರೆ ಟೀಂ ಇಂಡಿಯಾ ಬೌಲಿಂಗ್ ಸಮಸ್ಯೆ ಇದೀಗ ತಲೆನೋವಾಗಿ ಪರಿಣಮಿಸಿದೆ.