March 4, 2026
Wednesday, March 4, 2026
spot_img

ಬೆಂಗಳೂರು ದರೋಡೆ ಪ್ರಕರಣ: ಆರೋಪಿಗಳ ಸುಳಿವು ಸಿಕ್ಕಿದೆ ಎಂದ ಪರಮೇಶ್ವರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡ ಹಗಲೇ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಬಂಧನಕ್ಕೊಳಪಡಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ಎಟಿಎಂಗಳಲ್ಲಿ ಹಣ ಠೇವಣಿ ಇಡುವ ಬಗ್ಗೆ ಆರೋಪಿಗಳಿಗೆ ಮಾಹಿತಿ ನೀಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ವ್ಯಕ್ತಿಯನ್ನು ಗುರುತಿಸಲು ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆಂದು ಹೇಳಿದ್ದಾರೆ.

ಎಟಿಎಂಗಳಿಗೆ ಹಣ ಹಾಕುವ ಮಾಹಿತಿಯನ್ನು ಆರೋಪಿಗಳಿಗೆ ಯಾರೋ ನೀಡಿದ್ದಾರೆ. ಇದಕ್ಕೆ ಕಾರಣ ಏನು? ಮಾಹಿತಿ ಕೊಟ್ಟಿದ್ದು ಯಾರು? ಹಣ ಹಾಕುವವರಲ್ಲಿ ಯಾರಾದರೂ ಇದ್ದಾರೋ? ಎಂಬುದರ ಬಗ್ಗೆ ಈಗಷ್ಟೇ ಮಾಹಿತಿ ಸಿಕ್ಕಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.

ನಗರದಲ್ಲಿ ಹಗಲು ಹೊತ್ತಿನಲ್ಲಿ ಇಂತಹ ಘಟನೆ ನಡೆದಿರುವುದು ಇದೇ ಮೊದಲು. 7 ಕೋಟಿ ರೂ.ಗೂ ಹೆಚ್ಚು ಮೊತ್ತದ ಹಣ ದರೋಡೆಯಾಗಿದೆ. ವಾಹನ ಸಂಖ್ಯೆ ಎಲ್ಲದರ ಮಾಹಿತಿ ಸಿಕ್ಕಿದೆ. ಕೃತ್ಯ ಎಸಗಿದವರು ಇಲ್ಲಿಯವರಾ? ಹೊರ ರಾಜ್ಯದವರಾ? ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಮಾಹಿತಿ ಸಿಕ್ಕಿದೆ. ತನಿಖೆಗೆ ಅಡ್ಡಿಯಾಗುವುದರಿಂದ ಎಲ್ಲ ಮಾಹಿತಿಯನ್ನು ಹಂಚಿಕೊಳ್ಳಲಾಗುವುದಿಲ್ಲ. ಖಂಡಿತವಾಗಿ ಅರೋಪಿಗಳನ್ನು ಬಂಧಿಸುತ್ತೇವೆಂದು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !