ದಿಗಂತ ಡಿಜಿಟಲ್ ಡೆಸ್ಕ್:
ಬಾಲಕಿಯ ಶೌಚಾಲಯ ಶುಚಿ ಇಲ್ಲ ಎಂಬುದನ್ನು ಗಮನಿಸಿ ಬಿಜೆಪಿ ಸಂಸದರೊಬ್ಬರು ಖುದ್ದು ಬರಿಗೈಯಲ್ಲಿ ಶೌಚಾಲಯ ಸ್ವಚ್ಛಗೊಳಿಸಿದ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದ್ದು, ಈ ಬಗೆಗಿನ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸದ್ದು ಮಾಡುತ್ತಿದೆ.
ಪ್ರಧಾನಿ ಮೋದಿ ಜನ್ಮದಿನವಾದ ಸೆ.17 ರಿಂದ ಮಹಾತ್ಮಗಾಂಧಿ ಜನ್ಮದಿನ ಅ. 2 ರವರೆಗೆ ಯುವ ಘಟಕದಿಂದ ಸೇವಾ ಪಖ್ವಾಡ ಸ್ವಚ್ಛತಾ ಅಭಿಯಾನ ನಡೆಯುತ್ತಿದೆ. ಇದರ ಭಾಗವಾಗಿ ಯುವ ಘಟಕವು ಬಾಲಕಿಯರ ಶಾಲಾ ಆವರಣದಲ್ಲಿ ಗಿಡ ನೆಡುವ ಕಾರ್ಯ ಹಮ್ಮಿಕೊಂಡಿತ್ತು. ಈ ವೇಳೆ ಮಧ್ಯಪ್ರದೇಶದ ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ಅವರೂ ಅಲ್ಲಿಗೆ ಭೇಟಿ ನೀಡಿದ್ದರು. ಈ ವೇಳೆ ಶಾಲಾ ಶೌಚಾಲಯ ಸ್ವಚ್ಛವಾಗಿಲ್ಲ ಎಂಬುದನ್ನು ಅವರು ಗಮನಿಸಿದ್ದು, ಖುದ್ದು ಅವರೇ ಶೌಚಾಲಯ ಸ್ವಚ್ಛಗೊಳಿಸಲು ಮುಂದಾಗಿದ್ದಾರೆ. ಈ ಶುಚಿತ್ವ ಕಾರ್ಯದ ವೀಡಿಯೋವನ್ನು ಸ್ವತಃ ಸಂಸದರೇ ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
पार्टी द्वारा चलाये जा रहे सेवा पखवाड़ा के तहत युवा मोर्चा के द्वारा बालिका विद्यालय खटखरी में वृक्षारोपण कार्यक्रम के उपरांत विद्यालय के शौचालय की सफाई की।@narendramodi @JPNadda @blsanthosh @ChouhanShivraj @vdsharmabjp @HitanandSharma pic.twitter.com/138VDOT0n0
— Janardan Mishra (@Janardan_BJP) September 22, 2022