Friday, November 21, 2025

ಉತ್ತರ ಪ್ರದೇಶದ ಮದರಸಾ ಶಿಕ್ಷಕರಿಗೆ ಇನ್ಮುಂದೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಲಿಗಢ ಜಿಲ್ಲಾಡಳಿತವು ಎಲ್ಲಾ ಮದರಸಾ ಶಿಕ್ಷಕರಿಗೆ ಬಯೋಮೆಟ್ರಿಕ್ ವ್ಯವಸ್ಥೆಯ ಮೂಲಕ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶ ಸರ್ಕಾರ ಹೊರಡಿಸಿದ ಸೂಚನೆಗಳನ್ನು ಅನುಸರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಜೀವ್ ರಂಜನ್ ತಿಳಿಸಿದ್ದಾರೆ.

“ಇನ್ನು ಮುಂದೆ, ಮದರಸಾ ಶಿಕ್ಷಕರ ವೇತನವನ್ನು ಅವರ ಬಯೋಮೆಟ್ರಿಕ್ ಹಾಜರಾತಿ ದಾಖಲೆಗಳ ಆಧಾರದ ಮೇಲೆ ವಿತರಿಸಲಾಗುವುದು” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

error: Content is protected !!