BIG NEWS | ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು: ಸಿಎಂ ಗೆಹ್ಲೋಟ್ ಪಾಳಯದ 92 ಶಾಸಕರು ರಾಜೀನಾಮೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಉದ್ಭವಿಸಿದೆ. ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರಲು ಗೆಹ್ಲೋಟ್ ಬಣದ ಎಲ್ಲಾ ಶಾಸಕರು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಗೆಹ್ಲೋಟ್ ಬಣದ ಎಲ್ಲಾ ಶಾಸಕರು ತಮ್ಮ ರಾಜೀನಾಮೆಯನ್ನ ಸ್ಪೀಕರ್ ಸಿಪಿ ಜೋಶಿ ಅವರಿಗೆ ಸಲ್ಲಿಸಲಿದ್ದಾರೆ.

ಎಲ್ಲಾ ಶಾಸಕರು ಕೋಪಗೊಂಡು ರಾಜೀನಾಮೆ ನೀಡುತ್ತಿದ್ದಾರೆ ಎಂದು ರಾಜಸ್ಥಾನ ಸರ್ಕಾರದ ಸಚಿವ ಮತ್ತು ಗೆಹ್ಲೋಟ್ ಅವರ ಆಪ್ತರಾದ ಪರತಾಪ್ ಸಿಂಗ್ ಖಚರಿಯಾವಾಸ್ ಹೇಳಿದ್ದಾರೆ.

ಸಿಎಂ ಅಶೋಕ್ ಗೆಹ್ಲೋಟ್ ಅವರನ್ನು ಸಂಪರ್ಕಿಸದೆ ಹೇಗೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು 92 ಶಾಸಕರು ರಾಜೀನಾಮೆ ನೀಡುವುದಾಗ ಘೋಷಿಸಿದ್ದಾರೆ ಎಂದು ವರದಿಯಾಗಿದೆ.

ಅಂದ್ಹಾಗೆ, ಇಂದು ಸಂಜೆ ಸಿಎಂ ಅಶೋಕ್ ಗೆಹ್ಲೋಟ್ ಮನೆಯಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.ಇದಕ್ಕಾಗಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಉಸ್ತುವಾರಿ ಅಜಯ್ ಮಾಕನ್ ಅವರನ್ನು ದೆಹಲಿಯಿಂದ ವೀಕ್ಷಕರಾಗಿ ಜೈಪುರಕ್ಕೆ ಕಳುಹಿಸಲಾಗಿತ್ತು.
ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಮುಖ್ಯಮಂತ್ರಿಯನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂಬ ನಿರ್ಣಯವನ್ನು ಅಂಗೀಕರಿಸುವಂತೆ ಶಾಸಕರಿಗೆ ಸೂಚಿಸಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!