ಹೊಸಗಂತ ವರದಿ, ಕೊಪ್ಪಳ:
ನಿಷೇಧಿತ ಐಎಸ್ ಸಂಘಟನೆ ಜೊತೆ ನಂಟು ಹೊಂದಿದ ಆರೋಪದಡಿ ಗಂಗಾವತಿ ತಾಲೂಕಿನ ಮೈಬೂಬ್ ನಗರದ ನಿವಾಸಿ, ಬಾಳೆಹಣ್ಣಿನ ವ್ಯಾಪಾರಿ ಶಬ್ಬೀರ್ ಎಂಬಾತನನ್ನು ಶಿವಮೊಗ್ಗ ಪೊಲೀಸರು ಭಾನುವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗದಲ್ಲಿ ಬಂಧನಕ್ಕೆ ಒಳಗಾಗಿರುವ ಯುವಕರ ಜೊತೆ ನಂಟು ಹೊಂದಿದ್ದ ಎನ್ನಲಾಗಿದೆ. ಪೊಲೀಸರು ಶಬ್ಬೀರನನ್ನು ವಶಕ್ಕೆ ಪಡೆದು ರಾತ್ರಿಯೇ ಶಿವಮೊಗ್ಗಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ. ತುಂಗೆ ದಡದಲ್ಲಿ ಬಾಂಬ್ ಸ್ಫೋಟ ಪ್ರಯೋಗ ನಡೆಸಿದ್ದ ಯುವಕರ ಮೊಬೈಲ್ನಲ್ಲಿ ಶಬ್ಬೀರ್ ಜೊತೆ ಮಾತನಾಡಿದ ಕರೆ ದಾಖಲೆಗಳು ಪತ್ತೆಯಾಗಿವೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ