ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲಯಾಳಂ ಜನಪ್ರಿಯ ಸಿನಿಮಾ ನಿರ್ದೇಶಕ ಅಶೋಕನ್ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅಶೋಕನ್ ಅವರಿಗೆ 60 ವರ್ಷ ವಯಸ್ಸಾಗಿತ್ತು. ಅಶೋಕನ್ ಕೊಚ್ಚಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆ.
ಹಲವು ಮಾಲಿವುಡ್ ಸಿನಿಮಾಗಳನ್ನು ನಿರ್ದೇಶಿಸಿದ್ದ ಅಶೋಕನ್ ಭಾರಿ ಜನಪ್ರಿಯತೆಗಳಿಸಿದ್ದರು. 1989 ರಲ್ಲಿ ವರ್ನಾಮ್ ಎಂಬ ಸಿನಿಮಾದ ಮೂಲಕ ಮಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದರು.