Friday, November 21, 2025

ಬೆಂಗಳೂರು ದರೋಡೆ ಪ್ರಕರಣ: ಕೊನೆಗೂ ಸಿಕ್ಕಿದ ಆರೋಪಿಗಳ ಸುಳಿವು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರದಲ್ಲಿ 7.11 ಕೋಟಿ ನಗದು ದರೋಡೆ ಪ್ರಕರಣ ಸಂಬಂಧ ಆರೋಪಿಗಳ ಸುಳಿವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಪ್ರಕರಣ ನಡೆದ 24 ಗಂಟೆಯೊಳಗೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಸಿಸಿ ಕ್ಯಾಮೆರಾ ದೃಶ್ಯಗಳನ್ನಾಧರಿಸಿ ಖದೀಮರ ಬೆನ್ನತ್ತಿದ್ದ ಪೊಲೀಸರು, ಇಬ್ಬರು ಶಂಕಿತ ಕಳ್ಳರನ್ನು ಅರೆಸ್ಟ್‌ ಮಾಡಿದ್ದಾರೆ.

ಖದೀಮರು ದರೋಡೆಗೆ ಬಳಸಿದ್ದ ಇನ್ನೋವಾ ಕಾರು ಆಂಧ್ರಪ್ರದೇಶದ ಚಿತ್ತೂರು ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಿರುಪತಿಯಲ್ಲಿ ಕಾರು ಬಿಟ್ಟು ಆರೋಪಿಗಳು ಪರಾರಿ ಆಗಿದ್ದಾರೆ. ಈ ನಡುವೆ ಕಾರಿನ ನಂಬರ್‌ ಪ್ಲೇಟ್ ಬದಲಿಸಿ, ಓಡಾಡುತ್ತಿದ್ದ ಇಬ್ಬರು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ.

ದರೋಡೆಯ ವೇಳೆ ಕರ್ನಾಟಕ ನೋಂದಣಿ ನಂಬರ್ ಪ್ಲೇಟ್‌ ಹಾಕಿದ್ದ ಆರೋಪಿಗಳು, ಪರಾರಿಯಾದ ಬಳಿಕ ಯುಪಿ ನೋಂದಣಿಯ ನಂಬರ್ ಪ್ಲೇಟ್ ಹಾಕಿಕೊಂಡು ಓಡಾಡುತ್ತಿದ್ದರು ಎನ್ನಲಾಗಿದೆ. ಸಿಸಿಟಿವಿ ದೃಶ್ಯ ಮತ್ತು ಲೊಕೇಶನ್ ಆಧರಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹಿಂದಿ ಮಾತನಾಡಿ ಆರೋಪಿಗಳು ದಾರಿ ತಪ್ಪಿಸುವ ಕೆಲಸ ಮಾಡಿದ್ದರು. ಆದರೆ, ಅನುಮಾಸ್ಪದವಾಗಿ ವರ್ತಿಸಿದ್ದರಿಂದ ಸಿಕ್ಕಿಬಿದ್ದಿದ್ದಾರೆ.

error: Content is protected !!