ಹೊಸದಿಗಂತ ಡಿಜಿಟಲ್ ಡೆಸ್ಕ್
ಕುಲ್ಗಾಮ್ ಎನ್ಕೌಂಟರ್ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ನೊಂದಿಗೆ ಸಂಪರ್ಕ ಹೊಂದಿದ್ದ ಪಾಕಿಸ್ತಾನಿ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಉಗ್ರನನ್ನು ಅಬು ಹುರಾರಾ ಎಂದು ಗುರುತಿಸಲಾಗಿದೆ. ಪೊಲೀಸರು ಆತನಿಂದ ಎಕೆ 47 ರೈಫಲ್ ಸೇರಿದಂತೆ ಸ್ಫೋಟಕ ಸಾಮಗ್ರಿಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
“ಹತನಾದ ಭಯೋತ್ಪಾದಕನನ್ನು ಅಬು ಹುರಾರಾ ಎಂದು ಗುರುತಿಸಲಾಗಿದೆ, ನಿಷೇಧಿತ ಭಯೋತ್ಪಾದಕ ಸಂಘಟನೆ ಜೆಎಂ ಜೊತೆ ನಂಟು ಹೊಂದಿರುವ ವಿದೇಶಿ ಪಾಕಿಸ್ತಾನಿ ಭಯೋತ್ಪಾದಕ. ಆತನಿಂದ ಅಪಾಯಕಾರಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಇದಕ್ಕೂ ಮುನ್ನ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸೇನಾ ಯೋಧ ಹಾಗೂ ಇಬ್ಬರು ನಾಗರಿಕರು ಗಾಯಗೊಂಡಿದ್ದರು. ಗಾಯಗೊಂಡ ಮೂವರೂ ನಾಗರಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಹಿಂದಿನ ದಿನ ಕುಲ್ಗಾಮ್ನ ಬೀಟ್ಪೋರ್ಟ್ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿತ್ತು. ಭದ್ರತಾ ಪಡೆಗಳೊಂದಿಗೆ ಪೊಲೀಸರು ಈ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ