ಪುತ್ತೂರು: ಪಿಎಫ್ಐ ಮುಖಂಡ ಜಾಬೀರ್ ಅರಿಯಡ್ಕ ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂದು ಮುಂಜಾನೆಯಿಂದಲೇ ರಾಜ್ಯದ ಹಲವೆಡೆ ಪೊಲೀಸರು ದಾಳಿ ನಡೆಸುತ್ತಿದ್ದು, ಪುತ್ತೂರು ಮೂಲದ ಪಿಎಫ್ಐ ಮುಖಂಡ ಜಾಬೀರ್ ಅರಿಯಡ್ಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಮುಂಜಾನೆಯಿಂದಲೇ ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪಿಎಫ್ಐ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದು, ಪಿಎಫ್ಐ ಪುತ್ತೂರು ಜಿಲ್ಲಾಧ್ಯಕ್ಷ ಜಾಬೀರ್ ಅರಿಯಡ್ಕ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಜಾಬೀರ್ ನನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಪ್ರತಿಬಂಧಕ ಕಾಯ್ದೆಯಡಿ ಗರಿಷ್ಠ ಅವಧಿಯ ಮುಚ್ಚಳಿಕೆಗಾಗಿ ಕಾರ್ಯ ನಿರ್ವಾಹಕ ನ್ಯಾಯಾಧೀಶರೂ ಆಗಿರುವ ತಹಶೀಲ್ದಾರ್ ಮುಂದೆ ಹಾಜರುಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!