ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಜಾಬ್ ವಿರುದ್ಧದ ಪ್ರತಿಭಟನೆಗಳು ಇರಾನ್ನಲ್ಲಿ ಆಂದೋಲನ ಹಂತವನ್ನು ತಲುಪಿವೆ. ಇದೀಗ ಇರಾನ್ ಸೇರಿದಂತೆ ಹಲವು ದೇಶಗಳಲ್ಲಿ ಹಿಜಾಬ್ ವಿರುದ್ಧ ಪ್ರತಿಭಟನೆಗಳು ಮುಂದುವರಿದಿವೆ. ಅನೇಕ ಮಹಿಳೆಯರು ರಸ್ತೆಗಳಲ್ಲಿ ಹಿಜಾಬ್ ಸುಟ್ಟು, ಕೂದಲು ಕತ್ತರಿಸುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ.
ಟರ್ಕಿಯ ಗಾಯಕ ಮೆಲೆಕ್ ಮೊಸ್ಸೊ ಕೂಡಾ ಹಿಜಾಬ್ ವಿರುದ್ಧದ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದು, ವೇದಿಕೆಯ ಮೇಲೆ ಪ್ರದರ್ಶನ ನೀಡುವಾಗ ಕತ್ತರಿಯಿಂದ ತನ್ನ ಕೂದಲನ್ನು ಕತ್ತರಿಸಿಕೊಂಡಿದ್ದಾರೆ. ಈ ಮೂಲಕ ಇರಾನ್ ಸೇರಿದಂತೆ ಹಲವು ದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ಮಹಿಳೆಯರಿಗೆ ಬೆಂಬಲ ನೀಡಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನೇಕರು ಗಾಯಕಿಯ ಕಾರ್ಯವನ್ನು ಶ್ಲಾಘಿಸಿದ್ದಾರೆ.
Turkish singer @MelekMosso cuts off her hair on stage in solidarity with the Iranian women. Thank you Melek!#MahsaAmini #مهسا_امینی #IranProtests2022 pic.twitter.com/ZjISxjGkAL
— Omid Memarian (@Omid_M) September 27, 2022