IND vs SA ಮೊದಲ T20: ಯಾವ ಚಾನಲ್‌ ನಲ್ಲಿ ನೇರಪ್ರಸಾರ? ಪಂದ್ಯದ ಸಮಯ, ಪ್ಲೇಯಿಂಗ್‌ 11 ಬಗ್ಗೆ ಇಲ್ಲಿದೆ ಮಾಹಿತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ತಿರುವನಂತಪುರಂನಲ್ಲಿರುವ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬುಧವಾರ ಆರಂಭವಾಗಲಿರುವ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ.
T20 ವಿಶ್ವಕಪ್‌ಗಾಗಿ ಆಸ್ಟ್ರೇಲಿಯಾಕ್ಕೆ ತೆರಳುವ ಮೊದಲು ಎರಡೂ ತಂಡಗಳಿಗೆ ತಮ್ಮ ಕೌಶಲ್ಯಗಳನ್ನು ತೀಕ್ಷ್ಣಗೊಳಿಸಲು ಮತ್ತು ತಮ್ಮನ್ನು ತಾವು ಪರೀಕ್ಷಿಸಿಕೊಳ್ಳಲು ಈ ಸರಣಿಯು ಕೊನೆಯ ಅವಕಾಶವಾಗಿರಲಿದೆ. ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾವನ್ನು ತವರಿನಲ್ಲಿ 2-1 ಅಂತರದಿಂದ ಸೋಲಿಸಿದ ನಂತರ ಮೆನ್‌ ಇನ್‌ ಬ್ಲೂ ಪಡೆ ಹೆಚ್ಚಿನ ಆತ್ಮವಿಶ್ವಾಸದಲ್ಲಿ ಕಣಕ್ಕಿಳಿಯುತ್ತಿದೆ.
ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ T20I ಸರಣಿ ವಿಜಯಗಳ ಸಾಧನೆಯನ್ನು ಬೆನ್ನಿಗೆ ಇಟ್ಟುಕೊಂಡು  ದಕ್ಷಿಣ ಆಫ್ರಿಕಾ ಭಾರತಕ್ಕೆ ಬಂದಿಳಿದಿದೆ. ಸೌತ್‌ ಆಫ್ರಿಕಾಕ್ಕೆ ಟ್ರಿಸ್ಟಾನ್ ಸ್ಟಬ್ಸ್‌ ರೂಪದಲ್ಲಿ ಹೊಸ ಪವರ್-ಹಿಟ್ಟರ್ ಸಿಕ್ಕಿದ್ದಾನೆ. ಜೊತೆಗೆ ಕ್ವಿಂಟನ್ ಡಿ ಕಾಕ್, ಟೆಂಬಾ ಬವುಮಾ ಮತ್ತು ರಿಲೀ ರೊಸ್ಸೌವ್ ಅವರು ಬ್ಯಾಟಿಂಗ್‌ನಲ್ಲಿ ಸ್ಥಿರ ಪ್ರದರ್ಶವನ್ನು ನೀಡುತ್ತಿದ್ದಾರೆ. ಐಡೆನ್ ಮಾರ್ಕ್ರಾಮ್ ಮತ್ತು ಡ್ವೈನ್ ಪ್ರಿಟೋರಿಯಸ್ ರೂಪದಲ್ಲಿ ಗುಣಮಟ್ಟದ ಆಲ್-ರೌಂಡರ್‌ಗಳನ್ನು ತಂಡ ಹೊಂದಿದೆ. ಡೇವಿಡ್ ಮಿಲ್ಲರ್ ತಂಡದ ಸ್ಫೋಟಕ ಫಿನಿಶರ್. ಬೌಲಿಂಗ್‌ ವಿಭಾಗದಲ್ಲಿ ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ಲುಂಗಿ ಎನ್‌ಗಿಡಿ ಮತ್ತು ತಬ್ರೈಜ್ ಶಮ್ಸಿ ಅವರಿರುವ ಮಾರಕ ಪಡೆ ಇದೆ.
ಏತನ್ಮಧ್ಯೆ ಟಿಂ ಇಂಡಿಯಾ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಿದ್ದು, ಬೌಲಿಂಗ್ ಆಲ್ ರೌಂಡರ್ ಶಹಬಾಜ್ ಅಹ್ಮದ್ ಅವರ ಬದಲಿಯಾಗಿ ಬಂದಿದ್ದಾರೆ. ಹಿರಿಯ ವೇಗಿ ಭುವಿಗೂ ವಿಶ್ರಾಂತಿ ನೀಡಲಾಗಿದ್ದು, ಅವರ ಸ್ಥಾನಕ್ಕೆ ಅರ್ಷದೀಪ್ ಸಿಂಗ್ ಪುನರಾಗಮನ ಮಾಡಲಿದ್ದಾರೆ. ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಲ್ ಪಟೇಲ್ ಟಿ20 ವಿಶ್ವಕಪ್‌ಗೆ ಭಾರತದ ಸಿದ್ಧತೆಯಲ್ಲಿ ಪ್ರಮುಖರಾಗಿದ್ದಾರೆ. ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಎಲ್ಲಾ ಮೂರು ಪಂದ್ಯಗಳಲ್ಲಿ ಆಡುವ ಸಾಧ್ಯತೆಯಿದೆ. ಅಕ್ಷರ್ ಪಟೇಲ್ ಅವರು ತಮ್ಮ ಸೊಗಸಾದ ಪ್ರದರ್ಶನದ ಮೂಲಕ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರ ಅನುಪಸ್ಥಿತಿಯನ್ನು ಮರೆಸುತ್ತಿದ್ದಾರೆ.
ಉಭಯ ತಂಡಗಳು ಪರಸ್ಪರ ಟಿ 20ಗೆ ಅತ್ಯಗತ್ಯವಾದ ಫೈರ್‌ಪವರ್ ಹೊಂದಿರುವುದರಿಂದ ಸರಣಿಯು ರೋಮಾಂಚನಕಾರಿಯಾಗಿ ಮೂಡಿಬರುವ ನಿರೀಕ್ಷೆಯಿದೆ.

ಪಂದ್ಯದ ಸಮಯ:
1 ನೇ T20I ಯು ಸೆಪ್ಟೆಂಬರ್ 27ರಂದು ಸಂಜೆ 7 ಗಂಟೆಗೆ ಆರಂಭವಾಗಲಿದೆ. ಇನ್ನು ಪಂದ್ಯದ ಟಾಸ್ ಸಂಜೆ 6.30ಕ್ಕೆ ನಡೆಯಲಿದೆ.

ಕ್ರೀಡಾಂಗಣ
: ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣ, ತಿರುವನಂತಪುರಂ

ಲೈವ್ ಸ್ಟ್ರೀಮಿಂಗ್ ಮಾಹಿತಿ:
ಭಾರತದ ದಕ್ಷಿಣ ಆಫ್ರಿಕಾ ಸರಣಿಯು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದೆ. ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ 1, ಸ್ಟಾರ್ ಸ್ಪೋರ್ಟ್ಸ್ 1 ಎಚ್‌ಡಿ, ಸ್ಟಾರ್ ಸ್ಪೋರ್ಟ್ಸ್ 1 ಹಿಂದಿ ಮತ್ತು ಸ್ಟಾರ್ ಸ್ಪೋರ್ಟ್ಸ್ 1 ಎಚ್‌ಡಿ ಹಿಂದಿಯಲ್ಲಿ ವೀಕ್ಷಿಸಲು ಲಭ್ಯವಿರುತ್ತದೆ. ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಸಹ ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ.

ತಂಡಗಳ ಸಂಭಾವ್ಯ ಪ್ಲೇಯಿಂಗ್‌ 11:
ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್ (ಕೀ.), ರೀಜಾ ಹೆಂಡ್ರಿಕ್ಸ್, ಟೆಂಬಾ ಬವುಮಾ (ಸಿ), ಐಡೆನ್ ಮಾರ್ಕ್ರಾಮ್, ಟ್ರಿಸ್ಟಾನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ಡ್ವೈನ್ ಪ್ರಿಟೋರಿಯಸ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ

ಭಾರತ ತಂಡ:
ರೋಹಿತ್ ಶರ್ಮಾ(ಸಿ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್‌ ಪಂತ್‌, ದಿನೇಶ್ ಕಾರ್ತಿಕ್ (ವಿ), ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!