Monday, November 10, 2025

ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಕೇಸ್: ಇನ್ನಿಬ್ಬರು ಆರೋಪಿಗಳು ಪೋಲೀಸರ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಹಾಕಿದ್ದವರ ಪೈಕಿ ಸಿಸಿಬಿ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 4ಕ್ಕೆ ಏರಿದೆ.

ಸಿಸಿಬಿ ಪೊಲೀಸರು ರಾಜೇಶ್ ಹಾಗೂ ಭುವನ್‌ ಗೌಡ ಎಂಬುವವರನ್ನು ಬಂಧಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ರೇಣುಕಾಸ್ವಾಮಿ ಕುಟುಂಬದ ಪರವಾಗಿ ನಿಂತ ಕಾರಣಕ್ಕೆ ನಟಿ ರಮ್ಯಾಗೆ ದರ್ಶನ್ ಅಭಿಮಾನಿಗಳು ಅಶ್ಲೀಲ ಮೆಸೇಜ್ ಕಳುಹಿಸಿದ್ದರು. ಇದರ ಬೆನ್ನಲ್ಲೇ ದರ್ಶನ್ ಫ್ಯಾನ್ಸ್ ವಿರುದ್ಧ ಗರಂ ಆದ ನಟಿ ಅಶ್ಲೀಲ ಮೆಸೇಜ್ ಕಳುಹಿಸಿದ್ದವರ ಖಾತೆಗಳನ್ನು ಬಹಿರಂಗಗೊಳಿಸಿದ್ದರು. ಜೊತೆಗೆ 43 ಅಕೌಂಟ್‌ಗಳ ವಿರುದ್ಧ ದೂರು ದಾಖಲಿಸಿದ್ದರು.

ಇತ್ತೀಚಿಗೆ ಬಂಧಿಸಿದ್ದ ಇಬ್ಬರ ಪೈಕಿ ಓರ್ವ ದರ್ಶನ್ ಅಭಿಮಾನಿ ಹಾಗೂ ಇನೋರ್ವ ಧನ್ವೀರ್ ಅಭಿಮಾನಿ ಎಂದು ತಿಳಿದು ಬಂದಿದೆ.

error: Content is protected !!