ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿಗೆ Z+ ಭದ್ರತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಗೃಹ ಸಚಿವಾಲಯವು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಮುಕೇಶ್ ಅಂಬಾನಿ ಅವರ ಭದ್ರತೆಯನ್ನು ಹೆಚ್ಚಿಸಿದೆ. ಬೇಹುಗಾರಿಕಾ ಏಜೆನ್ಸಿಗಳ ಮಾಹಿತಿಯನ್ನು ಆಧರಿಸಿ ಹೆಚ್ಚಳ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮುಕೇಶ್ ಅಂಬಾನಿ ಅವರಿಗೆ ಈವರೆಗೆ Z ಶ್ರೇಣಿ ಭದ್ರತೆಯನ್ನು ನೀಡಲಾಗುತ್ತಿದ್ದು, ಈ ಹಿಂದೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅವರ ಭದ್ರತೆಯನ್ನು ಹೆಚ್ಚಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಈಗ ಅವರಿಗೆ Z+ಭದ್ರತೆಯನ್ನು ನೀಡಲಾಗುತ್ತಿದ್ದು, ಇದು 55 ಮಂದಿಯ ತಂಡವನ್ನು ಹೊಂದಿದೆ.

Z+ಶ್ರೇಣಿಯಲ್ಲಿ 55 ಮಂದಿ ಭದ್ರತಾ ಸಿಬ್ಬಂದಿ ಇರಲಿದ್ದು, ಈ ಪೈಕಿ ಹತ್ತಕ್ಕೂ ಅಧಿಕ ಮಂದಿ ಎನ್ ಎಸ್ ಜಿ ಕಮಾಂಡೋಗಳು ಇರಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!