Friday, November 21, 2025

ಚಿನ್ನದ ಕಳ್ಳಸಾಗಣೆ ಕೇಸ್: ನಟಿ ರನ್ಯಾ ರಾವ್ ವಿರುದ್ಧ 4000 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಯಾಂಡಲ್‌ವುಡ್ ನಟಿ ಮತ್ತು ಈ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ರನ್ಯಾ ರಾವ್ ಅವರಿಗೆ ಸಂಬಂಧಿಸಿದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣವು ಇದೀಗ ಮಹತ್ವದ ಘಟ್ಟ ತಲುಪಿದೆ. ಆರು ತಿಂಗಳ ಸುದೀರ್ಘ ತನಿಖೆ ನಡೆಸಿದ ಕಂದಾಯ ಗುಪ್ತಚರ ನಿರ್ದೇಶನಾಲಯವು ನ್ಯಾಯಾಲಯಕ್ಕೆ ಬರೋಬ್ಬರಿ 4,000 ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ.

ಈ ತನಿಖೆಯ ವೇಳೆ, ಸುಮಾರು ₹123 ಕೋಟಿ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿರುವುದು ಬೆಳಕಿಗೆ ಬಂದಿದೆ. ಈ ಐವರು ಆರೋಪಿಗಳ ಪ್ರಕರಣದಲ್ಲಿ, ನಟಿ ರನ್ಯಾ ರಾವ್ ಒಬ್ಬರೇ ₹104 ಕೋಟಿ ಮೌಲ್ಯದ ಚಿನ್ನವನ್ನು ಅಕ್ರಮ ಸಾಗಾಟದಲ್ಲಿ ತೊಡಗಿಕೊಂಡಿರುವುದು ಸ್ಪಷ್ಟವಾಗಿ ಅನಾವರಣಗೊಂಡಿದೆ ಎಂದು ಡಿಆರ್‌ಐ ಮೂಲಗಳು ತಿಳಿಸಿವೆ.

ಈಗಾಗಲೇ ಐವರು ಆರೋಪಿಗಳಿಗೂ ಶೋಕಾಸ್ ನೋಟಿಸ್ ಜಾರಿ ಮಾಡಿರುವ ಡಿಆರ್‌ಐ, ಪ್ರಕರಣದ ಅಂತಿಮ ಹಂತವಾಗಿ ದೋಷಾರೋಪ ಪಟ್ಟಿ ಸಲ್ಲಿಸಿದೆ. ಚಾರ್ಜ್‌ಶೀಟ್‌ನಲ್ಲಿ ರನ್ಯಾ ರಾವ್ ಅವರು ತಮ್ಮ ಮಲತಂದೆ ರಾಮಚಂದ್ರರಾವ್ ಅವರ ಕಾರಿನ ದುರ್ಬಳಕೆ ಮತ್ತು ಪ್ರಭಾವಿಗಳಂತೆ ಬಿಂಬಿಸಲು ರಾಜಕಾರಣಿಗಳ ಹೆಸರುಗಳ ದುರ್ಬಳಕೆ ಮಾಡಿಕೊಂಡಿರುವ ಬಗ್ಗೆಯೂ ಸಮಗ್ರ ಮಾಹಿತಿಯನ್ನು ಉಲ್ಲೇಖಿಸಲಾಗಿದೆ. ಉಳಿದ ನಾಲ್ವರು ಆರೋಪಿಗಳಿಗೂ ಸಹ ಪ್ರತ್ಯೇಕ ಶೋಕಾಸ್ ನೋಟಿಸ್ ನೀಡಲಾಗಿದೆ.

error: Content is protected !!